![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 25, 2020, 3:05 AM IST
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರುದ್ಧ ದೇಶದ ಜನರು ಅಸಹಕಾರ ಚಳವಳಿ ಆರಂಭಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು, ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದೆ.
ಜನ ವಿರೋಧಿ ನೀತಿಗಳಿಗೆ ಅಸಹಕಾರ ತೋರುವುದು ಸಂವಿಧಾನ ಬಾಹಿರವಲ್ಲ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದಾರೆ. ಹೀಗಾಗಿ ದೇಶದ ಜನತೆ ಮತ್ತೂಮ್ಮೆ ಅಸಹಕಾರ ಚಳವಳಿಗೆ ಸಿದ್ಧರಾಗಬೇಕಿದೆ. ಬಿಜೆಪಿಯ ಸಂವಿಧಾನ ವಿರೋಧಿ ಕಾನೂನಿಗೆ ಇದೇ ಸರಿಯಾದ ಉತ್ತರ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಡಳಿತದ ಬಗ್ಗೆ ವಾಗ್ಧಾಳಿ ನಡೆಸಿರುವ ಅವರು, ಪ್ರಜಾಪ್ರಭುತ್ವ ವಿರೋಧಿ ಕಾರ್ಯಕ್ರಮಗಳನ್ನು ಜಾರಿ ಮಾಡುವುದು ವಾಜಪೇಯಿ ಕಾಲದಲ್ಲಿ ಬಿಜೆಪಿಯ ರಹಸ್ಯ ಅಜೆಂಡಾ ಆಗಿತ್ತು. ಮೋದಿಯವರು ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಜನ ವಿರೋಧಿ ಮತ್ತು ಸಂವಿಧಾನ ವಿರೋಧಿ ಅಜೆಂಡಾವನ್ನು ಜಾರಿಗೆ ತರಲು ಬಹಿರಂಗವಾಗಿ ತೊಡೆ ತಟ್ಟಿ ನಿಂತಿದ್ದಾರೆ. ಇದು ದೇಶದ ಭವಿಷ್ಯಕ್ಕೆ ಮಾರಕ.
ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿದೆ. ಬಡತನ, ಹಸಿವು, ನಿರುದ್ಯೋಗ, ಮಹಿಳಾ ದೌರ್ಜನ್ಯ, ರೈತರ ಆತ್ಮಹತ್ಯೆ ಇಂತಹ ಹಲವಾರು ಜ್ವಲಂತ ಸಮಸ್ಯೆಗಳು ದೇಶವನ್ನು ಬಾಧಿಸುತ್ತಿವೆ. ಇವೆಲ್ಲ ಸರಿಪಡಿಸುವುದನ್ನು ಬಿಟ್ಟು ಸಿಎಎ, ಎನ್‌ಆರ್‌ಸಿ ಜಾರಿಗೆ ತರುವ ಹಿಂದಿನ ಉದ್ದೇಶವೇನು ಎಂದು ಅರ್ಥವಾಗದಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.