ಧಾರ್ಮಿಕ ಕಟ್ಟಡಗಳ ತೆರವು: ಸಮಗ್ರ ವರದಿ ಕೇಳಿದ ಹೈಕೋರ್ಟ್
Team Udayavani, Sep 6, 2019, 5:52 AM IST
ಬೆಂಗಳೂರು: ಪಾರ್ಕ್, ರಸ್ತೆ ಮತ್ತಿತರ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗುರುವಾರ ಆದೇಶಿಸಿದೆ.
ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ಈ ವಿಚಾರವಾಗಿ ಸಲ್ಲಿಸಲಾಗಿರುವ ಇತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ವೇಳೆ, ಪಾರ್ಕ್, ರಸ್ತೆ ಮತ್ತಿತರ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಎಲ್ಲಾ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಮಾಹಿತಿ ತರಿಸಿ ಕೊಂಡು, ಅ.9ರೊಳಗೆ ಸಮಗ್ರ ವರದಿಯ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಮುಖ್ಯವಾಗಿ, 2009ರ ಏ.29ರಂದು ಸುಪ್ರೀಂಕೋರ್ಟ್ ತೀರ್ಪು ನೀಡುವುದಕ್ಕೂ ಮೊದಲು ಎಷ್ಟು ಧಾರ್ಮಿಕ ಕೇಂದ್ರಗಳನ್ನು ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಲಾಗಿತ್ತು. ಅವುಗಳಲ್ಲಿ ಎಷ್ಟನ್ನು ತೆರವುಗೊಳಿಸಲಾಗಿದೆ? ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಒಳಗೊಂಡಿರಬೇಕು ಎಂದು ನಿರ್ದೇಶನ ನೀಡಿ, ವಿಚಾರಣೆಯನ್ನು ಅ.11ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್‌ಡೆತ್: ಹೆಡ್ ಕಾನ್‌ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.