ಆದೇಶ ಹಿಂಪಡೆಯಲು ಸಿಎಂ ಒಪ್ಪಿಗೆ: ಪ್ರಕಾಶ್
Team Udayavani, Jun 6, 2019, 3:00 AM IST
ಬಂಟ್ವಾಳ: ಸರಕಾರಿ ಶಾಲೆಗಳ ಒಂದನೇ ತರಗತಿಯ 30 ಮಕ್ಕಳಿಗೆ ಮಾತ್ರ ಆಂಗ್ಲ ಮಾಧ್ಯಮ ಶಿಕ್ಷಣ ಎಂಬ ಆದೇಶವನ್ನು ಹಿಂಪಡೆಯಲು ಸರಕಾರ ಒಪ್ಪಿಕೊಂಡಿದ್ದು, ದಾಖಲಾತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ ಎಂದು “ಸರಕಾರಿ ಶಾಲೆ ಉಳಿಸಿ, ಬೆಳೆಸಿ’ ರಾಜ್ಯ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್ ತಿಳಿಸಿದ್ದಾರೆ.
ಈ ಬಾರಿ ರಾಜ್ಯ ಸರಕಾರವು ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಕಲಿಕೆಗೆ ಅನುಮತಿ ನೀಡಿತ್ತು. ಹೀಗಾಗಿ ಅಂತಹ ಶಾಲೆಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಸರಕಾರವು ಜೂ.1ರಂದು ಆದೇಶ ಹೊರಡಿಸಿ, ಕೇವಲ 30 ಮಕ್ಕಳಿಗೆ ಮಾತ್ರ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅವಕಾಶ ನೀಡಬೇಕೆಂದು ತಿಳಿಸಿತ್ತು.
ಇದರಿಂದ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಿದ್ದರು. ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ “ಸರಕಾರಿ ಶಾಲೆ ಉಳಿಸಿ, ಬೆಳೆಸಿ’ ರಾಜ್ಯ ಸಮಿತಿಯು ತಕ್ಷಣ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು.
ಈ ಕುರಿತು ಸಮಿತಿಯಿಂದ ಮಾಹಿತಿ ಪಡೆದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಮುಖ್ಯಮಂತ್ರಿ ಜತೆ ಚರ್ಚಿಸಿ, ಆದೇಶ ಹಿಂಪಡೆಯುವಂತೆ ಮನವೊಲಿಸುವ ಪ್ರಯತ್ನ ಮಾಡಿದ್ದರು. ಈ ಕುರಿತು ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಭೋಜೇಗೌಡ ತಿಳಿಸಿದ್ದು, ಸರಕಾರದ ಪರಿಷ್ಕೃತ ತೀರ್ಮಾನವು ಸ್ವಾಗತಾರ್ಹ ಎಂದು ಪ್ರಕಾಶ್ ಅಂಚನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
Waqf: ಅನ್ವರ್ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.