ಪುನೀತ್ ರಾಜ್ ಕುಮಾರ್ ಜನ್ಮದಿನ ‘ಸ್ಪೂರ್ತಿ ದಿನ’ವಾಗಿ ಆಚರಿಸುವುದಾಗಿ ಸಿಎಂ ಘೋಷಣೆ
Team Udayavani, Sep 15, 2022, 9:26 PM IST
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ( ಮಾರ್ಚ್17 ) ”ಸ್ಪೂರ್ತಿ ದಿನ” ಎಂದು ಸರಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನಿಲ್ ಕುಮಾರ್ , ಪುನೀತ್ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂಬುದು ಸೇರಿದಂತೆ ಮಾಡಿದ ಮನವಿಗಳಿಗೆ ಸ್ಪಂದಿಸಿದ ಅವರು ಈ ಭರವಸೆ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿಪಾತ್ರ ವ್ಯಕ್ತಿಯಾಗಿದ್ದರು. ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಪೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.
ಪ್ರತ್ಯೇಕ ನಿಧಿ
ಈಡಿಗ- ಬಿಲ್ಲವ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇನ್ನಿತರ ಅಭಿವೃದ್ಧಿಗೆ ಪ್ರತ್ಯೇಕ ನಿಧಿಯನ್ನು ಪ್ರಾರಂಭಿಸಲಾಗುವುದು. ಈ ವರ್ಷದ ಬಜೆಟ್ ನಲ್ಲೇ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬ್ರಹ್ಮರ್ಷಿ ನಾರಾಯಣಗುರು ಶ್ರೇಷ್ಠ ಆಧ್ಯಾತ್ಮಿಕ ಸಂತರು. ಅವರನ್ನು ಒಂದು ಜಾತಿ ಹಾಗೂ ಧರ್ಮಕ್ಕೆ ಸೀಮಿತ ಮಾಡುವುದಕ್ಕೆ ಸಾಧ್ಯವಿಲ್ಲ. ಇಡಿ ಜಗತ್ತಿಗೆ ಅವರ ತತ್ತ್ವ ಮಾರ್ಗದರ್ಶಿಯಾಗಿದೆ. ಬೆಂಗಳೂರಿನಲ್ಲಿ ನಾರಾಯಣಗುರು ಹೆಸರಿನಲ್ಲಿ ಸಮುದಾಯಭವನ ಸ್ಥಾಪನೆ ಮಾಡುವುದಕ್ಕಾಗಿ ಸರಕಾರದ ವತಿಯಿಂದ 5 ಕೋಟಿ ರೂ.ನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.
ನೆಲಮಂಗಲ ಸಮೀಪ ಇರುವ ಸೋಲೂರು ಆರ್ಯ-ಈಡಿಗ ಮಠ ಪ್ರಾರಂಭಿಸಿರುವ ಶೈಕ್ಷಣಿಕ ಚಟುವಟಿಕೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ನಿರ್ಮಾಣಕ್ಕೆ ಸರಕಾರದ ವತಿಯಿಂದ ಜಾಗ ನೀಡಲಾಗುವುದು.ಇದರ ಜತೆಗೆ ಕಾರ್ಯಕ್ರಮದಲ್ಲಿ ಕನ್ನಡ- ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನಿಲ್ ಕುಮಾರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.