ಬೆಂಗಳೂರಿನಲ್ಲಿ ನಾಳೆಯಿಂದ ಯಾವುದೇ ಲಾಕ್ ಡೌನ್ ಇರುವುದಿಲ್ಲ: ಬಿಎಸ್ ಯಡಿಯೂರಪ್ಪ
ಕೋವಿಡ್ ಉಪಕರಣ ಖರೀದಿಯಲ್ಲಿ ಒಂದು ರೂ. ಅವ್ಯವಹಾರ ನಡೆದಿಲ್ಲ: ಬಿಎಸ್ ಯಡಿಯೂರಪ್ಪ
Team Udayavani, Jul 21, 2020, 5:15 PM IST
ಬೆಂಗಳೂರು: ಕೋವಿಡ್ ಉಪಕರಣ ಖರೀದಿಯಲ್ಲಿ ಒಂದು ರೂ. ದುರುಪಯೋಗವೂ ನಡೆದಿಲ್ಲ. ಯಾವುದೇ ಮಾಹಿತಿಯನ್ನು ನಾವು ಕೊಡಲು ಸಿದ್ದರಿದ್ದೇವೆ. ವಿಪಕ್ಷ ನಾಯಕರು ಬಂದು ಯಾವುದೇ ದಾಖಲೆಗಳನ್ನು ಕೇಳಿದರೂ ನೀಡಲು ನಾವು ಸಿದ್ದರಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಫೇಸ್ ಬುಕ್ ಮತ್ತು ಯೂಟ್ಯೂಬ್ ಲೈವ್ ನಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿದರು.
ಕೋವಿಡ್ ತಡೆಯಲು ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹೀಗಾಗಿ ಇನ್ನು ಮುಂದೆ ಬೆಂಗಳೂರು ಸಹಿತವಾಗಿ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್‌ಡೌನ್ ಇರುವುದಿಲ್ಲ. ಆದರೆ, ಕಂಟೈನ್ಮೆೆಂಟ್ ವಲಯಗಳನ್ನು ಇನ್ನಷ್ಟು ಬಿಗಿಗೊಳಿಸುತ್ತದೇವೆ. ಅಲ್ಲಿರುವವರು ಇದಕ್ಕೆೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಲಾಕ್ ಡೌನ್ ಹೊರತು ಪಡಿಸಿ ಬೇರೆ ಕ್ರಮಗಳನ್ನು ಕೈಗೊಳ್ಳಿ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸೋಂಕು ತಡೆಗಟ್ಟಬೇಕು ಎಂದು ಸೂಚಿಸಿದ್ದೇನೆ ಎಂದರು.
ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ಇರುವುದಿಲ್ಲ. ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣವೂ ಮುಖ್ಯ. ಹಾಗಾಗಿ ಬೆಂಗಳೂರಿನಲ್ಲಿ ನಾಳೆಯಿಂದ ಯಾವುದೇ ಲಾಕ್ ಡೌನ್ ಇರುವುದಿಲ್ಲ ಎಂದರು.
ರಾಜ್ಯದಲ್ಲಿ ಪತ್ತೆಯಾಗಿರುವ ಸೋಂಕಿತರಲ್ಲಿ ಶೇ.80 ರಷ್ಟು ಜನರಿಗೆ ರೋಗಲಕ್ಷಣವಿಲ್ಲ. ಶೇ.5ರಷ್ಟು ಮಂದಿಗೆ ಮಾತ್ರ ಐಸಿಯು, ವೆಂಟಿಲೇಟರ್ ಅಗತ್ಯವಿದೆ. ರೋಗಲಕ್ಷಣವಿಲ್ಲದ ಸೋಂಕಿತರಿಗೆ ಹೋಮ್ ಐಸಲೋಶನ್ ಮತ್ತು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದರು.
ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಸೋಂಕಿತರು ಆತ್ಮಹತ್ಯೆೆ ಮಾಡಿಕೊಳ್ಳುವುದು ಸರಿಯಲ್ಲ. ರಾಜ್ಯದಲ್ಲಿ 100ಕ್ಕೆೆ 98 ಮಂದಿ ಗುಣಮುಖರಾಗುತ್ತಿದ್ದಾರೆ. ಹೀಗಾಗಿ ಯಾರು ಕೂಡ ಆತಂಕ ಅಥವಾ ಭಯ ಪಡುವ ಅಗತ್ಯವಿಲ್ಲ. ಆದರೆ, ಎಚ್ಚರಿಕೆಯಿಂದ ಇರಬೇಕು. ಜನ ಜೀವನ ಸಾಮಾನ್ಯ ಸ್ಥಿಿತಿಗೆ ಬರಬೇಕು ಹಾಗೂ ಸೋಂಕಿತರೊಂದಿಗೆ ಸೌಜನ್ಯದಿಂದಲೇ ವರ್ತಿಸಬೇಕು. ಕೋವಿಡ್ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಕ್ರಮ ಮುಂದುವರಿಸಲಿದೆ ಎಂದು ಹೇಳಿದರು.
ಈ ಹಿಂದೆ ಪರೀಕ್ಷಾ ವರದಿ ಬರಲು ತಡವಾಗುತ್ತಿದ್ದು, ಇನ್ನು ಮುಂದೆ 24 ಗಂಟೆಯೊಳಗೆ ಪರೀಕ್ಷಾ ವರದಿ ಬರುವಂತೆ ನೋಡಿಕೊಳ್ಳಲಾಗಿದೆ ಎಂದರು.
ಆ್ಯಂಬುಲೆನ್ಸ್ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಬೇಡ. ಅಗತ್ಯವಿರುವಷ್ಟು ಆ್ಯಂಬೆಲೆನ್ಸ್ ಸೌಲಭ್ಯ ನಮ್ಮ ಬಳಿಯಿದೆ. ಯಾರಿಗೂ ಆತಂಕ, ಗೊಂದಲ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.