ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪಾಠ
Team Udayavani, Jul 22, 2022, 6:17 AM IST
ಬೆಂಗಳೂರು: ರಾಜ್ಯ ಸರಕಾರ ಒಂದು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಸರಕಾರದ ವಿವಿಧ ಇಲಾಖೆಗಳ ಕಾರ್ಯವೈಖರಿ ಹಾಗೂ ಪ್ರಗತಿಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುದ್ದು ಪರಿಶೀಲನೆ ನಡೆಸಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಘೋಷಿತ ಯೋಜನೆಗಳನ್ನು ಸರಿಯಾಗಿ ತಲುಪಿಸುವಲ್ಲಿ ನಿರ್ಲಕ್ಷ್ಯ ತೋರುವ ಇಲಾಖೆಗಳ ಮುಖ್ಯಸ್ಥರನ್ನು ತರಾಟೆ ತೆಗೆದುಕೊಂಡಿದ್ದಾರೆ.
ಗುರುವಾರ ಸರಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸುಮಾರು ಮೂರು ಗಂಟೆ ಆಡಳಿತ ವ್ಯವಸ್ಥೆ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.
ಯೋಜನೆ ಘೋಷಣೆಯಾದ ಬಳಿಕ ಆಗಿರುವ ಪ್ರಗತಿ ಮತ್ತು ವಿಳಂಬವಾಗಲು ಕಾರಣ, ಅದನ್ನು ಜಾರಿಗೊಳಿಸಲು ಇಲಾಖೆಯ ತಳ ಹಂತದ ಅಧಿಕಾರಿಯಿಂದ ಹಿಡಿದು ಇಲಾಖೆ ಮುಖ್ಯಸ್ಥರವರೆಗೂ ಮಾಡಿದ ಪ್ರಯತ್ನವೇನು, ಒಂದು ವೇಳೆ ಅಧಿಕಾರಿಗಳ ಮಟ್ಟದಲ್ಲಿ ಸಮಸ್ಯೆಗೆ ಪರಿಹಾರ ದೊರೆಯದಿದ್ದರೆ, ಸಂಬಂಧ ಪಟ್ಟ ಇಲಾಖೆ ಸಚಿವರು ಅಥವಾ ಸ್ವತಃ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆಯೇ, ಯೋಜನೆ ಅನುಷ್ಠಾನಕ್ಕೆ ಸಮಸ್ಯೆಯಾದರೂ ತನ್ನ ಗಮನಕ್ಕೆ ತಾರದೆ ಇರುವುದಕ್ಕೆ ಸ್ಪಷ್ಟ ಕಾರಣ ನೀಡುವಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
ಯೋಜನೆ ಅನುಷ್ಠಾನ ವಿಳಂಬ ಹಾಗೂ ಅಧಿಕಾರಿಗಳು ಮಾಡಿರುವ ನಿರ್ಲಕ್ಷ್ಯವನ್ನು ಮುಖ್ಯಮಂತ್ರಿಗಳೇ ಅಧಿಕಾರಿಗಳಿಗೆ ತಿಳಿಸಿ ಅಚ್ಚರಿ ಮೂಡಿಸಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.