![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 24, 2023, 7:30 AM IST
ಬೆಂಗಳೂರು: ನಾವು ಆರ್ಥಿಕ ಶಿಸ್ತು ಮೀರಿಲ್ಲ. 65 ವರ್ಷ ಆಡಳಿತ ನಡೆಸಿದವರು ಮಾಡಿದ್ದ ಸಾಲ 1.30 ಲಕ್ಷ ಕೋಟಿ ರೂ. ಆದರೆ ಸಿದ್ದರಾಮಯ್ಯ ಅವರು ಐದು ವರ್ಷಗಳಲ್ಲಿ ಮಾಡಿದ್ದು 1.30 ಲಕ್ಷ ಸಾಲ ಮಾಡಿದ್ದಾರೆ. ಅಲ್ಲಿಂದಲೇ ಸಾಲದ ಪ್ರಮಾಣ ಹೆಚ್ಚಳವಾಗುತ್ತ ಬಂದಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿ, ರಾಜ್ಯ ಬಿಜೆಪಿ ಸರಕಾರ ಸಾಲ ಜಾಸ್ತಿ ಮಾಡಿ ದಿವಾಳಿ ಮಾಡಿದೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.
ಜಿಎಸ್‌ಡಿಪಿಯ ಶೇ. 25ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕೆಂಬ ನಿಯಮವಿದ್ದು, ಈ ನಿಯಮ ಪಾಲಿಸಲಾಗಿದೆ. ನನ್ನ ಅವಧಿಯಲ್ಲಿ ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ. 2020-21 ರಲ್ಲಿ ಕೇಂದ್ರ ಸರಕಾರದಿಂದ ಶೇ. 5 ವರೆಗೆ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ ನಮ್ಮ ಸರಕಾರ ಕೇವಲ ಶೇ. 3ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರಕಾರಕ್ಕಿದೆ ಎಂದು ಸಮರ್ಥಿಸಿಕೊಂಡರು.
ಹಣಕಾಸಿನ ಇತಿಮಿತಿಗಳು ಹಾಗೂ ಆವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದರು.
ಮದ್ಯ ಮಾರಿ ಸರಕಾರ ನಡೆಸಬೇಕಿಲ್ಲ
ಜೆಡಿಎಸ್‌ನ ಎಚ್.ಕೆ.ಕುಮಾರಸ್ವಾಮಿ ಮಾತನಾಡಿ, ರಾಜ್ಯ ಸರಕಾರ ಅಬಕಾರಿ ಬಾಬಿ¤ನಿಂದ 35 ಸಾವಿರ ಕೋಟಿ ರೂ. ಆದಾಯ ಸಂಗ್ರಹ ಗುರಿ ಹೊಂದಿದೆ. ಯಾವುದೇ ನಾಗರಿಕ ಸರಕಾರಕ್ಕೆ ಇದು ಶೋಭೆ ತರದು, ಮದ್ಯ ಹೆಚ್ಚು ಮಾರಾಟ ಮಾಡಿ ನಾವು ಸರಕಾರ ನಡೆಸಬೇಕಿಲ್ಲ. ಇದು ಹೆಣ್ಣುಮಕ್ಕಳ ಕಣ್ಣೀರಿಗೆ ಕಾರಣವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.