ರೈತರ ಅಭ್ಯುದಯಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಸಿಎಂ

Team Udayavani, Dec 27, 2021, 6:51 AM IST

ರೈತರ ಅಭ್ಯುದಯಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಸಿಎಂ

ಮೈಸೂರು: ಕೃಷಿ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸುವ ಸಲುವಾಗಿ ಸೆಕೆಂಡರಿ ಅಗ್ರಿಕಲ್ಚರ್‌ ಡೈರೆಕ್ಟೊರೇಟ್‌  (ನಿರ್ದೇಶನಾಲಯ)  ಸ್ಥಾಪಿಸಲಾಗುವುದು ಎಂದು ಸಿಎಂ ಬಸವ ರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ರವಿವಾರ ಆಯೋಜಿಸಿದ್ದ ವಿಶ್ವ ರೈತ ದಿನಾಚರಣೆ ಮತ್ತು ರಾಜ್ಯಮಟ್ಟದ ಸಮಾ ವೇಶದಲ್ಲಿ ಮಾತನಾಡಿದ ಅವರು,  ಪ್ರತ್ಯೇಕ ನಿರ್ದೇ ಶನಾಲಯದ   ಮೂಲಕ ಕೃಷಿ ಉತ್ಪನ್ನಗಳಿಂದ ಉಪ ಕೃಷಿ ಉತ್ಪನ್ನ ತಯಾರಿಸಲಾಗುವುದು. ಇದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಒಟ್ಟಾರೆ ರೈತರ ಆದಾಯ ಹೆಚ್ಚುತ್ತದೆ ಎಂದರು.

ರೈತರ ಮಕ್ಕಳ ಕಲಿಕೆಗೆ ಅನು ಕೂಲ ಕಲ್ಪಿಸುವ ವಿದ್ಯಾನಿಧಿ ಯೋಜನೆಯನ್ನು ಗ್ರಾಮೀಣ ಭಾಗದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೂ ವಿಸ್ತರಿಸಿ ಅವರು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವುದನ್ನು ತಡೆಯಲಾಗುವುದು ಎಂದರು.

ಸ್ಮರಣ ಸಂಚಿಕೆ ಬಿಡುಗಡೆ ಬಿಡುಗಡೆ, ಸಮ್ಮಾನ:

ಇದೇ ಸಂದರ್ಭ ರೈತ ಧ್ವನಿ ವಿಶೇಷಾಂಕ ಹಾಗೂ ಹಸಿರು ಹೊನ್ನು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾ ಯಿತು. ಬಳಿಕ ರೈತ ಹೋರಾಟದಲ್ಲಿ 40 ವರ್ಷ ಪೂರೈಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವೇದಿಕೆಯಲ್ಲಿದ್ದ ಗಣ್ಯರು ಸಮ್ಮಾನಿಸಿದರು.

ಸುತ್ತೂರುಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕೇಂದ್ರ ಸರಕಾರದ ರೈತರ ಆದಾಯ ದ್ವಿಗುಣ ಸಮಿತಿಯ ಮುಖ್ಯಸ್ಥ ಅಶೋಕ್‌ ದಳವಾಯಿ, ಪತ್ರಕರ್ತ ಎಚ್‌.ಆರ್‌. ರಂಗನಾಥ್‌, ರೈತ ದಿನಾಚರಣೆ ಸಮಿತಿ ಅಧ್ಯಕ್ಷ ಡಾ| ಎಸ್‌. ಶಿವರಾಜಪ್ಪ ಮುಂತಾದವರಿದ್ದರು.

ಬೆಲೆ ನಿಯಂತ್ರಣವೇ ದೊಡ್ಡ ಸಮಸ್ಯೆ :

ಕೃಷಿ ಬೆಳೆಗಳ ಬೆಲೆ ನಿಯಂತ್ರಣ ಮತ್ತು ಬೆಲೆ ನಿಗದಿ ದೊಡ್ಡ ಸಮಸ್ಯೆ ಯಾಗಿದೆ. ವಿಶ್ವ ವ್ಯಾಪಾರ ಸಂಘಟನೆಗೆ(ಡಬ್ಲ್ಯುಟಿಒ) ಸಹಿ ಹಾಕಿದ ಬಳಿಕ ರೈತರ ಹಣೆಬರಹವೇ ಬದಲಾಗಿದೆ. ಇದರಿಂದ ಜಾರಿಗೆ ಬಂದಿರುವ ಮುಕ್ತ ಮಾರುಕಟ್ಟೆಯಿಂದ ಬೆಲೆ ನಿಯಂತ್ರಣ ಹಕ್ಕನ್ನೇ ಕಳೆದುಕೊಂಡಿದ್ದು, ಎಪಿಎಂಸಿ ಕಾಯ್ದೆ ತರುವ ಮುನ್ನವೇ, ಅಂದರೆ 2007ರಲ್ಲೇ  47 ದೈತ್ಯ ಕಂಪೆನಿ

ಗಳು ಕೃಷಿ ಮಾರುಕಟ್ಟೆಯನ್ನು ಪ್ರವೇಶಿಸಿವೆ. ಇವೆಲ್ಲ ಕೃಷಿ ಸಂಬಂಧಿಸಿದ ಅಂತಾರಾಷ್ಟ್ರೀಯ ಮಟ್ಟದ ಒಪ್ಪಂದಗಳಿಗೆ ಸಹಿ ಹಾಕಿದ್ದರ  ಪರಿಣಾಮವಾ ಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯಿಂದ ಹೊರ ಬಂದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

ಮಾರ್ಚ್‌ ವೇಳೆಗೆ ಎಲ್ಲರಿಗೂ ಬೆಳೆ ಪರಿಹಾರ :

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಎಕರೆಯಷ್ಟು ಬೆಳೆ ನಷ್ಟವಾಗಿದೆ. ಕೊರೊನಾದ ಕಷ್ಟ ಕಾಲದಲ್ಲೂ ಕೇಂದ್ರ ಸರಕಾರದ ನೆರವು ಸೇರಿ ರಾಜ್ಯ ಸರಕಾರವು 2 ಪಟ್ಟು ಪರಿಹಾರ ನೀಡುತ್ತಿದ್ದು, ಒಂದು ತಿಂಗಳಿನಲ್ಲಿ ರೈತರ ಬ್ಯಾಂಕ್‌ ಖಾತೆಗೆ 800 ಕೋಟಿ ರೂ. ಮೊತ್ತವನ್ನು ಜಮೆ ಮಾಡಲಾಗಿದೆ. ಮುಂದಿನ ಫೆಬ್ರವರಿ, ಮಾರ್ಚ್‌ ಹೊತ್ತಿಗೆ ಎಲ್ಲರಿಗೂ ಪರಿಹಾರ ತಲುಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನದಿಂದ 2.40 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗಿದ್ದು, ಈ ಸಂಖ್ಯೆ 2021-22ರಲ್ಲಿ ಶೈಕ್ಷಣಿಕ ವರ್ಷಾಂತ್ಯಕ್ಕೆ 5 ಲಕ್ಷ ತಲುಪಲಿದೆ.-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.