ಇಂದು ಸಿಎಂ ದಿಲ್ಲಿಗೆ; ಆಕಾಂಕ್ಷಿಗಳಲ್ಲಿ ನಿರೀಕ್ಷೆ

Team Udayavani, Apr 29, 2022, 7:00 AM IST

thumb 3

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೊಸದಿಲ್ಲಿಗೆ ತೆರಳಲಿದ್ದು, ಬಿಜೆಪಿಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಮತ್ತೆ ಸಂಪುಟ ಸೇರುವ ನಿರೀಕ್ಷೆ ಗರಿಗೆದರಿದೆ. ಮೇ ಮೊದಲ ವಾರ ಸಚಿವ ಸಂಪುಟ ಪುನಾರಚನೆಯಾಗಬಹುದು ಬಿಜೆಪಿ ಮೂಲಗಳು ತಿಳಿಸಿವೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನ ಎ. 30ರಂದು ನಡೆಯಲಿದ್ದು, ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸದಿಲ್ಲಿಗೆ ತೆರಳಲಿದ್ದಾರೆ. ಇದರ ನಡುವೆಯೇ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ಪುನಾರಚನೆಯ ಕುರಿತು ಚರ್ಚಿಸುವ ಸಾಧ್ಯತೆ ಎಂಬ ನಿರೀಕ್ಷೆಯಲ್ಲಿ ಆಕಾಂಕ್ಷಿಗಳಿದ್ದಾರೆ.

ಸಂಪುಟ ಪುನಾರಚನೆಯ ಬಗ್ಗೆ ಪಕ್ಷ ಮತ್ತು ಸರಕಾರದ ಮಟ್ಟದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಗುಟ್ಟು ಬಿಟ್ಟುಕೊಡದಿರುವುದು ಆಕಾಂಕ್ಷಿಗಳು ಗೊಂದಲಕ್ಕೆ ಒಳಗಾಗುವಂತೆ ಮಾಡಿದೆ.

ಅಲ್ಲದೆ ಎ. 29ರಂದು ಹೊಸದಿಲ್ಲಿಗೆ ತೆರಳಲಿದ್ದರೂ, ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿಲ್ಲ ಎಂದು ಸಿಎಂ ಹೇಳಿರುವುದರಿಂದ ಸಂಪುಟ ಪುನಾರಚನೆ ಆಗುತ್ತದೆಯೇ ಅಥವಾ ಇಲ್ಲವೇ ಎನ್ನುವ ಅನಿಶ್ಚಿತತೆ ಆಕಾಂಕ್ಷಿಗಳಲ್ಲಿ ಮೂಡಿದೆ.

ಪುನಾರಚನೆ ನಿರೀಕ್ಷೆ :

ಬಿಜೆಪಿ ಪಕ್ಷದ ಮೂಲಗಳ ಪ್ರಕಾರ ಮೇ ಮೊದಲ ವಾರದಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದ್ದು, ಖಾಲಿ ಇರುವ ಐದು ಸ್ಥಾನಗಳ ಜತೆಗೆ ನಾಲ್ಕರಿಂದ ಐದು ಹಿರಿಯ ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವುದರಿಂದ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ತಲುಪಿಸುವ ಅಗತ್ಯವಿದ್ದು, ಅದಕ್ಕಾಗಿ ಸಕ್ರಿಯರಾಗಿರುವ ಯುವ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ವರಿಷ್ಠರ ಪಟ್ಟಿ :

ಹಾಲಿ ಸಚಿವರ ಕಾರ್ಯವೈಖರಿ ಹಾಗೂ ಪಕ್ಷ ಮತ್ತು ಸರಕಾರದ ಮಟ್ಟದಲ್ಲಿ ಅವರು ಮಾಡಿರುವ ಕೆಲಸಗಳು ಮತ್ತು ಅವರ ವರ್ಚಸ್ಸಿನ ಬಗ್ಗೆ ವರಿಷ್ಠರು ತಮ್ಮದೇ ಆದ ತಂಡದಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದರ ಆಧಾರದಲ್ಲಿಯೇ ಯಾರನ್ನು ಸಂಪುಟದಿಂದ ಕೈಬಿಡಬೇಕು ಮತ್ತು ಯಾರನ್ನು ಸಂಪುಟಕ್ಕೆ ಸೇರಿಸಬೇಕು ಎಂದು ವರಿಷ್ಠ ನಾಯಕರೇ ಪಟ್ಟಿ ಸಿದ್ಧಪಡಿಸಲಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದಾಗಿ ಸಿಎಂ ಹೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಎ. 30ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಶುಕ್ರವಾರ ರಾತ್ರಿ ಹೊಸದಿಲ್ಲಿಗೆ ತೆರಳಲಿದ್ದೇನೆ. ಸಂಪುಟ ಪುನಾರಚನೆ ಕುರಿತು ವರಿಷ್ಠರನ್ನು ಭೇಟಿಯಾಗಲು ಸಮಯ ಕೇಳಿಲ್ಲ.-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.