ಯುವಿಸಿಇ ವಿಶ್ವವಿದ್ಯಾಲಯಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

3 ವರ್ಷಗಳಲ್ಲಿ ನೂತನ ವಿವಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ

Team Udayavani, Sep 15, 2022, 9:36 PM IST

1–dsfds

ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ಮೂರು ವರ್ಷಗಳಲ್ಲಿ ಐಐಟಿ ಮಟ್ಟಕ್ಕೆ ಅಭಿವೃದ್ಧಿ ಪಡಿಸಲು ಸರಕಾರ ಬದ್ಧವಾಗಿದ್ದು, ಇದಕ್ಕೆ ಬೇಕಾದ ಸಕಲ ನೆರವನ್ನೂ ನೀಡಲಾಗುವುದು. ಜತೆಗೆ ಕಿಂಚಿತ್ತೂ ಹಸ್ತಕ್ಷೇಪವಿಲ್ಲದಂತಹ ಸ್ವಾತಂತ್ರ ಮತ್ತು ಸ್ವಾಯತ್ತತೆಯನ್ನು ಕೊಡಲಾಗುವುದು. ಈ ಮೂಲಕ ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಗ್ರಸಂಸ್ಥೆಯನ್ನಾಗಿ ಬೆಳೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಯುವಿಸಿಇ ವಿಶ್ವವಿದ್ಯಾಲಯವನ್ನು ಗುರುವಾರ ಕೆ.ಆರ್ ವೃತ್ತದ ಕ್ಯಾಂಪಸ್ ನಲ್ಲಿ ಉದ್ಘಾಟಿಸಿ ಮಾತನಾಡಿ, “ನೂತನ ವಿ.ವಿ.ಗೆ ಹಣಕಾಸು, ಅತ್ಯುತ್ತಮ ಬೋಧಕ ವೃಂದ, ಮೂಲಸೌಕರ್ಯ ಎಲ್ಲವನ್ನೂ ಧಾರಾಳವಾಗಿ ಕೊಡಲಾಗುವುದು. ನಮ್ಮ ವಿದ್ಯಾರ್ಥಿಗಳು ಉತ್ಕೃಷ್ಟ ಶಿಕ್ಷಣಕ್ಕೆ ಐಐಟಿ ತರಹದ ಸಂಸ್ಥೆಗಳನ್ನು ಹುಡುಕಿಕೊಂಡು ಹೋಗಬೇಕಾಗಿಲ್ಲ. ಯುವಿಸಿಇ ಜತೆಗೆ ರಾಜ್ಯದ ಇನ್ನೂ ಆರು ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಬೆಳೆಸುವ ಸಂಕಲ್ಪ ಮಾಡಲಾಗಿದೆ” ಎಂದು ಒತ್ತಿ ಹೇಳಿದರು.

ಯುವಿಸಿಇ ಯನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಬೆಳೆಸುವ ಕೆಲಸ ಎಂದೋ ಆಗಬೇಕಿತ್ತು. ಏಕೆಂದರೆ ಇಲ್ಲಿ ಪ್ರತಿಭೆಗೆ ಕೊರತೆ ಇರಲಿಲ್ಲ. ಆದರೆ, ವ್ಯವಸ್ಥೆಯಲ್ಲಿ ಇಚ್ಛಾಶಕ್ತಿಯ ಕೊರತೆ ಇತ್ತು. ನೂತನ ಕ್ಯಾಂಪಸ್ಸಿನಲ್ಲಿ ಕ್ಷುಲ್ಲಕ ರಾಜಕೀಯಕ್ಕೆ ಆಸ್ಪದ ಕೊಡದೆ, ಸ್ವಾಯತ್ತತೆಯನ್ನು ಸಾಧನೆಯ ಸೋಪಾನವನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಈ ವಿ.ವಿ.ಯನ್ನು ಮೂರು ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಮೊದಲ ಹಂತದಲ್ಲಿ ಅಭಿವೃದ್ಧಿ ಪಡಿಸಬೇಕು ಎನ್ನುವುದು ಸರಕಾರದ ಪಣವಾಗಿದೆ. ಹೀಗಾಗಿಯೇ, 2030ಕ್ಕೆ ಇಟ್ಟುಕೊಂಡಿದ್ದ ಗುರಿಯ ಕಾಲಾವಧಿಯನ್ನು ಇಳಿಸಲಾಗಿದೆ. ಶೈಕ್ಷಣಿಕ ಸುಧಾರಣೆಗೆ ಬದ್ಧವಾಗಿರುವ ರಾಜ್ಯ ಸರಕಾರ ಸಂಪೂರ್ಣ ಬೆಂಬಲ ನೀಡಿ, ಇದನ್ನು ಮಾಡಿಯೇ ತೀರುತ್ತದೆ ಎಂದರು.

“ಈ ದೇಶ ಕಂಡ ಅತ್ಯಂತ ಮೇಧಾವಿ ಎಂಜಿನಿಯರ್ ವಿಶ್ವೇಶ್ವರಯ್ಯನವರ ಜನ್ಮದಿನದಂದೇ ಈ ವಿ.ವಿ. ಅಸ್ತಿತ್ವಕ್ಕೆ ಬಂದಿದೆ. ಇದು ಅವರೇ ಹುಟ್ಟುಹಾಕಿದ ಕಾಲೇಜು. ಬದ್ಧತೆ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡುವುದು ಹೇಗೆನ್ನುವುದನ್ನು ತೋರಿಸಿದ ಸರ್‍‌ ಎಂವಿ ನಮಗೆ ಪ್ರೇರಣೆ ಆಗಿದ್ದಾರೆ. ಈಗ ಪ್ರಧಾನಿ ಮೋದಿಯವರು ಜಾಗತಿಕ ಸಮುದಾಯವು ಗುರುತಿಸುವಂತಹ ಬದಲಾವಣೆಗಳನ್ನು ತಂದಿದ್ದಾರೆ. ಯುವಿಸಿಇಯನ್ನು ವಿಶ್ವವಿದ್ಯಾಲಯವನ್ನಾಗಿ ಮಾಡುವಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರ ಬದ್ಧತೆ ಶ್ಲಾಘನೀಯವಾಗಿದೆ” ಎಂದು ಅವರು ಬಣ್ಣಿಸಿದರು.

ತಾರ್ಕಿಕ ಆಲೋಚನೆ ಮತ್ತು ವಿಶ್ಲೇಷಣಾತ್ಮಕ ಆಲೋಚನೆ ಮೇಳೈಸಿದಾಗ ಅತ್ಯುತ್ತಮ ಎಂಜಿನಿಯರುಗಳು ಸೃಷ್ಟಿಯಾಗುತ್ತಾರೆ. ನೀವೆಲ್ಲರೂ ಪರಿವರ್ತನೆಯ ಸಂಕ್ರಮಣಾವಸ್ಥೆಯಲ್ಲಿರುವ ಕಾಲದಲ್ಲಿ ಇದ್ದೀರಿ. ನಿಮ್ಮ ಕಲಿಕೆ ನಿರಂತರವಾಗಿರಬೇಕು. ಇಲ್ಲದಿದ್ದರೆ ಬದುಕಿನಲ್ಲಿ ಸೋಲುವ ಅಪಾಯವಿದೆ. ಈ ಎಚ್ಚರ ವಿದ್ಯಾರ್ಥಿಗಳಲ್ಲಿ ಇದ್ದು, ಮನುಷ್ಯಪ್ರಯತ್ನದಲ್ಲಿ ನಂಬಿಕೆ ಇಡಬೇಕು ಎಂದು ಕಿವಿಮಾತು ಹೇಳಿದರು.

ಭೂ ಮಾಲೀಕತ್ವ ಮತ್ತು ಬಂಡವಾಳಶಾಹಿಗಳ ಯುಗ ಮುಗಿದು ಹೋಗಿದೆ. ಇದೇನಿದ್ದರೂ ಜ್ಞಾನದ ಯುಗ. ಇದನ್ನು ಅರ್ಥ ಮಾಡಿಕೊಂಡರೆ ದೇಶವನ್ನೇ ಆಳಬಹುದು. ಯುವಿಸಿಇ ವಿದ್ಯಾರ್ಥಿಗಳು ಇದನ್ನು ಸಾಧ್ಯ ಮಾಡಿ ತೋರಿಸಲಿದ್ದಾರೆ ಎನ್ನುವ ವಿಶ್ವಾಸ ತಮ್ಮದಾಗಿದೆ ಎಂದು ಅವರು ಹೇಳಿದರು.

ಕ್ರಿಯಾಯೋಜನೆ ತೀರ್ಮಾನ

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, “ಯುವಿಸಿಇಯನ್ನು ಸ್ವಾಯತ್ತ ವಿವಿ ಮಾಡುವ ಬಗ್ಗೆ 20 ವರ್ಷಗಳಿಂದಲೂ ಮಾತು ಕೇಳಿಬರುತ್ತಿತ್ತು. ಆದರೆ ಈಗಿನ ಸರಕಾರ ಮಾತ್ರ ಈ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಿದೆ. ಈ ವಿ.ವಿ.ಯ ಪರಿಪೂರ್ಣ ಅಭಿವೃದ್ಧಿಗೆ ಸದ್ಯದಲ್ಲೇ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು. ಈ ಮೂಲಕ ಐಐಟಿಯನ್ನೂ ಮೀರಿಸುವಂತೆ ಬೆಳೆಸಲಾಗುವುದು” ಎಂದರು.

ಸಿಇಟಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯ ರ್‍ಯಾಂಕ್ ಪಡೆಯುವ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಶಿಕ್ಷಣಕ್ಕೆ ಯುವಿಸಿಇಯನ್ನು ಮೊದಲು ಆಯ್ಕೆ ಮಾಡಿಕೊಳ್ಳುವಂತೆ ಮಾಡಲಿದ್ದೇವೆ. ಈ ಬಗ್ಗೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕೂಡ ಅಪಾರ ಆಸಕ್ತಿ ತೋರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದ ಉನ್ನತ ಶಿಕ್ಷಣದಲ್ಲಿ ಅಪಾರ ಸುಧಾರಣೆ ಆಗುತ್ತಿದೆ. ಇದಕ್ಕೆ ಮುಖ್ಯಮಂತ್ರಿಗಳ ದೂರದೃಷ್ಟಿ ಕಾರಣವಾಗಿದೆ. ವಿದ್ಯಾರ್ಥಿಗಳಿಗೆ ತಮ್ಮ ಕನಸಿನ ಉದ್ಯೋಗ ಸಿಗುವಂತಹ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಇದರಲ್ಲಿ ಸ್ವಾಯತ್ತತೆ, ಸ್ವಾತಂತ್ರ ಮತ್ತು ಪಾರದರ್ಶಕತೆಗೆ ಒತ್ತು ಕೊಡಲಾಗಿದೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಯುವಿಸಿಯ ವಿಷನ್ ಡಾಕ್ಯುಮೆಂಟ್ ಅನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಯುವಿಸಿಇ ಆಡಳಿತ ಮಂಡಲಿ ಮುಖ್ಯಸ್ಥ ಬಿ.ಮುತ್ತುರಾಮನ್ ಮತ್ತು ಐಐಐಟಿ ನಿರ್ದೇಶಕ ಪ್ರೊ ಸದಗೋಪಬ್ ಮಾತನಾಡಿದರು. ಬೆಂಗಳೂರು ವಿವಿ ಕುಲಪತಿ ಡಾ.ಜಯಕರ, ಮುಖ್ಯಮಂತ್ರಿಯವರ ಪ್ರಧಾ‌ನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಪ್ರಾಂಶುಪಾಲ ಪ್ರೊ.ಎಚ್.ಎನ್. ರಮೇಶ್ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.