ಎಲ್ಲರೂ ಸೇರಿ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಲ್ಲ: ಸಿಎಂ ಬೊಮ್ಮಾಯಿ


Team Udayavani, Sep 12, 2021, 6:08 PM IST

CM Basavaraja Bommai Statement

ಬೆಂಗಳೂರು : ಎಲ್ಲರೂ ಸೇರಿ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.

ಕೆ.ಎಸ್. ಆರ್.ಟಿ.ಸಿ ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು  ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸರ್ಕಾರ, ಬಿಬಿಎಂಪಿ, ಕಾರ್ಪೊರೇಟ್ ವಲಯ ಎಲ್ಲರೂ ಸೇರಿ ಈ ಮಕ್ಕಳ ಆಸ್ಪತ್ರೆಯನ್ನು ಪುನರ್ ನಿರ್ಮಿಸಿದ್ದಾರೆ. ಕೋವಿಡ್ ನಿಂದಾಗಿ ಎಲ್ಲರಿಗೂ ಆರ್ಥಿಕ ತೊಂದರೆಗಳಾಗಿವೆ. ಜನ ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸಿಸುವ ಕೆಲಸವನ್ನು ಮಾಡಿದೆ. ಎಲ್ಲರೂ ಒಟ್ಟಾಗಿ ಇದನ್ನು ಎದುರಿಸಬೇಕೆನ್ನುವ ಮನಸ್ಥಿತಿಗೆ ಬಂದದ್ದರಿಂದ ಇಂಥ ಕೆಲಸಗಳು ಆಗುತ್ತವೆ ಎಂದರು.

ಇದನ್ನೂ ಓದಿ : ರಜೆ ಮತ್ತು ಕೆಲಸದ ದಿನಗಳ ನಡುವಿನ ವ್ಯತ್ಯಾಸವೇ ಅಂತ್ಯ: ಬಿಜೆಪಿ ವಿರುದ್ಧ ರಾಹುಲ್‌ ವಾಗ್ದಾಳಿ

ಮಾನವೀಯತೆ ಬಹಳ ಮುಖ್ಯ. ಇನ್ನೊಬ್ಬರಿಗಾಗಿ ಮನ ಮಿಡಿಯದಿದ್ದರೆ, ಮತ್ತೊಬ್ಬರಿಗಾಗಿ ನಾವು ಕೆಲಸ ಮಾಡದಿದ್ದರೆ, ಈ ಜೀವನ ಸಾರ್ಥಕವಾಗುವುದಿಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಕೋವಿಡ್ 1 ಮತ್ತು 2 ನೇ ಅಲೆಯಿಂದ ಸಾಕಷ್ಟು ಪಾಠವನ್ನು ಕಲಿತಿದ್ದೇವೆ. ಕೋವಿಡ್ 3 ನೇ ಅಲೆ ಬರಬಾರದು. ಬಂದರೂ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.  ಆಕ್ಸಿಜನ್ ಮಹತ್ವವನ್ನು ಕೋವಿಡ್ ಸಂದರ್ಭದಲ್ಲಿ ಅರಿತೆವು. ದಿನನಿತ್ಯದ ಆಹಾರದಲ್ಲಿನ ಮಹತ್ವವನ್ನು ಅರಿತು, ಪೌಷ್ಠಿಕ ಆಹಾರವನ್ನು ಪಡೆದುಕೊಂಡರೆ, ನಮ್ಮ ದೇಹದ ವ್ಯವಸ್ಥೆ ಸುಧಾರಿಸುತ್ತದೆ. ಏನಾದರೂ ಕೊರತೆಯಾದಾಗ ಮಾತ್ರ ನಮಗೆ ಅದರ ಮಹತ್ವ ತಿಳಿಯುತ್ತದೆ.  ಜಯನಗರ ಟಿ. ಬ್ಲಾಕ್ ಆಸ್ಪತ್ರೆ ಕೊರತೆಯಾದ ಸಂದರ್ಭದಲ್ಲಿ ಹುಟ್ಟಿಕೊಂಡಿದ್ದು, ಎಲ್ಲಾರೂ ಈ ಆಸ್ಪತ್ರೆಗೆ ಸಹಾಯ ಮಾಡಿದ್ದಾರೆ. ಇದನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ  ಇಲ್ಲಿನ ಸಿಬ್ಬಂದಿಯದ್ದು.ನಿಖರವಾಗಿ ಯಾರದ್ದು ಯಾವ ಜವಾಬ್ದಾರಿ ಎನ್ನುವುದನ್ನು ಗುರುತಿಸಬೇಕು ಎಂದು ತಿಳಿಸಿದರು.

ಈ ಕೆಲಸವನ್ನು ಇತರರು ಅನುಕರಿಸಬೇಕು. ಕೊಡುಗೆ ನೀಡಿದ ಎಲ್ಲಾ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು. ಆಗ ಮಾತ್ರ ಜೀವನಕ್ಕೆ ನಿಜವಾದ ಅರ್ಥ ಬರುತ್ತದೆ. ಅಗತ್ಯಕ್ಕಿಂತ ಹೆಚ್ಚಿನದನ್ನು ಪಡೆದುಕೊಳ್ಳುವ ಪ್ರವೃತ್ತಿಗಿಂತ ಕೊಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಸರ್ಕಾರ ಉತ್ಸುಕವಾಗಿರುವುದಾಗಿ ತಿಳಿಸಿದರು.

ಜಯನಗರದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡುವುದಾಗಿ ಸಿಎಂ ಇದೇ ಸಂದರ್ಭದಲ್ಲಿ ಭರವಸೆಯಿತ್ತರು. ಬೆಂಗಳೂರಿನ ಆರೋಗ್ಯ  ವ್ಯವಸ್ಥೆ  ಒಂದೇ ಪ್ರಾಧಿಕಾರದಡಿಗೆ ಬರಬೇಕು ಎನ್ನುವ ಚಿಂತನೆ ಇದೆ. ಬೆಂಗಳೂರಿಗೆ ಯೋಜಿತ ಬೆಳವಣಿಗೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು. ಜನಸಾಮಾನ್ಯರಿಗೆ ಸೇವೆಗಳು ಸುಲಭವಾಗಿ ದೊರೆಯಬೇಕು. ಬೆಂಗಳೂರಿನಲ್ಲಿ ಮೆಗಾ ಯೋಜನೆಗಳು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಿ  ಇನ್ನಷ್ಟು ವಾಸಯೋಗ್ಯವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಂಸದ ತೇಜಸ್ವಿ ಸೂರ್ಯ, ಶಾಸಕಿ ಸೌಮ್ಯ ರೆಡ್ಡಿ, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : 5ಜಿ ಯಾಕೆ ಆಮೆಯಾಗಿದೆ..? ನೆಟ್ ವರ್ಕ್ಸ್ ಸುತ್ತ ಮುತ್ತ ಕಾರ್ಯ ಸಾಧ್ಯತೆಗಳು..!

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.