ಗಡಿ ವಿಮೆ ವಿಚಾರವನ್ನು ಕೇಂದ್ರ ಗೃಹ ಸಚಿವರ ಗಮನಕ್ಕೂ ತರಲಾಗುವುದು: ಸಿಎಂ
Team Udayavani, Mar 17, 2023, 7:20 AM IST
ಬೆಂಗಳೂರು: ಮಹಾರಾಷ್ಟ್ರ ಸರಕಾರ ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ಖಂಡಿಸುತ್ತೇನೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗೆ ಮಾತನಾಡಿದ್ದಾಗ, ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಆಗಬಾರದೆಂದು ಒಪ್ಪಲಾಗಿತ್ತು. ಆದರೆ ಈಗ ಅದರ ಉಲ್ಲಂಘನೆಯಾಗಿದೆ. ಕೂಡಲೇ ಈ ಆದೇಶವನ್ನು ಮಹಾರಾಷ್ಟ್ರ ಹಿಂದೆಗೆದು ಕೊಳ್ಳಬೇಕು ಎಂದು ಆಗ್ರಹಿಸಿದರು.
ಗಡಿ ವಿಮೆ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತರಲಾಗುವುದು. ಈ ರೀತಿಯ ಯೋಜನೆಗಳನ್ನು ನಾವೂ ಪ್ರಕಟಿಸಬಹುದು. ಹಲವಾರು ತಾಲೂಕುಗಳು, ಗ್ರಾಮ ಪಂಚಾಯತ್ಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿವೆ. ಇಂಥ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.