ಪ್ರತಿ ಸ್ತ್ರೀಶಕ್ತಿ ಸಂಘಕ್ಕೆ 1.5 ಲಕ್ಷ ಸಾಲ: ಸಿಎಂ ಬೊಮ್ಮಾಯಿ
Team Udayavani, Aug 25, 2022, 9:00 PM IST
ರಾಣಿಬೆನ್ನೂರ: ಸ್ತ್ರೀ ಸಾಮರ್ಥ್ಯ ಯೋಜನೆಯಡಿ ರಾಜ್ಯದ 33 ಸಾವಿರ ಸ್ತ್ರೀಶಕ್ತಿ ಸಂಘಗಳಿಗೆ ಪ್ರತಿ ಹಳ್ಳಿಯಲ್ಲಿಯೇ ಒಂದು ಸಂಘಕ್ಕೆ 1.5 ಲಕ್ಷ ರೂ. ಸಾಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಇಲ್ಲಿನ ಬಿ.ಟಿ.ಪಾಟೀಲ ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಾಸಕ ಅರುಣಕುಮಾರ ಪೂಜಾರ 44ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳ ಬಲವರ್ಧನೆ, ಸ್ತ್ರೀಯರ ಆರ್ಥಿಕ ಸ್ವಾವಲಂಬನೆ ಮಾಡುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿನ ಭೂರಹಿತ ಕೃಷಿ ಕಾರ್ಮಿಕ ಮಕ್ಕಳಿಗೂ ರೈತ ನಿಧಿಯೋಜನೆಯಂತೆ ವಿದ್ಯಾನಿಧಿ ಜಾರಿಗೆ ತರಲಾಗುವುದು. ಕುಶಲ ಕಾರ್ಮಿಕರಿಗೆ 50 ಸಾವಿರ ರೂ. ಸಹಾಯಧನ ನೀಡಲಾಗುವುದು. ಕುರಿಗಾರರಿಗೆ ವಿಶೇಷ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯಡಿ ಪ್ರತಿ ಸಂಘಕ್ಕೆ 20 ಕುರಿ, 1 ಟಗರು ನೀಡಲಾಗುವುದು ಎಂದರು.
ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸುವ ಚಿಂತನೆ ಹಾಗೂ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವಕರ ಸ್ವಾವಲಂಬನೆ ಜೀವನಕ್ಕಾಗಿ 10 ಲಕ್ಷ ರೂ. ವರೆಗೆ ಸಹಾಯಧನ ನೀಡುವ ಯೋಜನೆಯಿದೆ. ರಾಜ್ಯದಲ್ಲಿ 8 ಸಾವಿರ ಶಾಲೆಗಳ ಹಾಗೂ 3 ಸಾವಿರ ಅಂಗನವಾಡಿ ಕೊಠಡಿಗಳನ್ನು ನಿರ್ಮಿಸುವ ಯೋಜನೆಯ ಗುರಿ ಹೊಂದಲಾಗಿದೆ. ರಾಜ್ಯದ ಪ್ರತಿಯೊಂದು ಮನೆಗೂ ಒಂದಿಲ್ಲೊಂದು ರೀತಿಯ ಸರ್ಕಾರದ ಸೌಲಭ್ಯಗಳನ್ನು ನೀಡುವುದರ ಮೂಲಕ ಅಭಿವೃದ್ಧಿಯ ಸಾಧನೆಗಳನ್ನು ಮಾಡಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ರಾಜ್ಯದಲ್ಲಿ ಅ ಧಿಕಾರದ ಗದ್ದುಗೆ ಏರಲಿದೆ. ಉತ್ತರ ಕರ್ನಾಟಕದ ಹೆಬ್ಟಾಗಿಲೆಂದೇ ಹೆಸರಾಗಿರುವ ರಾಣಿಬೆನ್ನೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ದೊಡ್ಡದಾದ ಹೆಬ್ಟಾಗಿಲು ನಿರ್ಮಿಸಲಾಗುವುದು ಎಂದರು.
ರಾಮಕೃಷ್ಣ ಆಶ್ರಮದ ಪ್ರಕಾಶಾನಂದಜಿ ಮಹಾರಾಜ್, ಶ್ರೀ ಓಂಕಾರೇಶ್ವರ ಮಹಾಸ್ವಾಮೀಜಿ, ಶ್ರೀ ವೀರಭದ್ರ ಶ್ರೀ, ಮಲ್ಲಿಕಾರ್ಜುನ ಶ್ರೀ, ಪಶುಪತಿ ಶ್ರೀ, ಶಾಸಕ ಅರುಣಕುಮಾರ ಪೂಜಾರ, ಸಂಸದ ಜಿ.ಎಂ.ಸಿದ್ದೇಶ್ವರ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ವಿರೂಪಾಕ್ಷಪ್ಪ ಬಳ್ಳಾರಿ, ಯು.ಬಿ. ಬಣಕಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.