ಭಯೋತ್ಪಾದನೆಯ ದಮನಕ್ಕೆ ಎಚ್ಚರ ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Oct 21, 2022, 12:27 PM IST
ಬೆಂಗಳೂರು: ದುಷ್ಟ ಶಕ್ತಿಗಳು ಸಮಾಜದ ಎಲ್ಲ ರಂಗದಲ್ಲೂ ಒಳ ಹೊಕ್ಕಿರುವುದರಿಂದ ಎಚ್ಚರ ಅಗತ್ಯ. ಭಯೋತ್ಪಾದನೆಯ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿ ಮಾತನಾಡಿದರು.
ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಇತಿಹಾಸ ಇದೆ. ಅನೇಕ ಸಂದರ್ಭಗಳಲ್ಲಿ ಪೊಲೀಸರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಮಾಜದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ದೇಶ ಹಾಗೂ ವಿದೇಶಿ ದುಷ್ಟ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿವೆ. ಅಪರಾಧ ಘಟಿಸಿದ ನಂತರ ಅದರ ನಿಯಂತ್ರಣಕ್ಕಾಗಿ ಕಾನೂನು ರೂಪುಗೊಳ್ಳುತ್ತದೆ. ಆದರೆ ಇಂಥ ಅಪರಾಧಗಳ ಸಾಧ್ಯತೆಗಳನ್ನು ಗ್ರಹಿಸಿ ಕಾನೂನುನ್ನು ಮುಂಚಿತವಾಗಿಯೇ ರೂಪಿಸುವ ಅಗತ್ಯವಿದೆ ಎಂದರು.
ಪೊಲೀಸರಿಗೆ ಆಧುನಿಕ ಶಸ್ತ್ರಾಸ್ತ್ರದ ಅಗತ್ಯ ಇದೆ. ಹಿರಿಯ ಅಧಿಕಾರಿಗಳು ಹೆಚ್ಚು ದಕ್ಷರಾಗಿ ಕಾರ್ಯ ನಿರ್ವಹಿಸಿದರೆ ಕೆಳ ಹಂತದ ಅಧಿಕಾರಿಗಳ ಮೆಲೆ ಪರಿಣಾಮ ಬೀರುತ್ತದೆ. ಪೊಲೀಸರು ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದೀರಿ. ಅದನ್ನು ಸರ್ಕಾರ ಮತ್ತು ಸಮಾಜ ಗೌರವಿಸುತ್ತದೆ. ತಮ್ಮ ಹಿಂದೆ ಕುಟುಂಬ ಮಕ್ಕಳು ಇದ್ದಾರೆ ಅದನ್ನು ಆಳುವವರು ಗಮನಿಸಬೇಕಾಗುತ್ತದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನಿರ್ವಹಣೆಗೆ ಪೊಲೀಸರ ಪಾತ್ರ ಅತ್ಯಂತ ಮುಖ್ಯ ಎಂದರು.
ಪೊಲೀಸರಿಗೆ ಸೌಲಭ್ಯ: ಪೊಲೀಸರಿಗೆ ಸೌಲಭ್ಯ ನೀಡುವ ವಿಚಾರದಲ್ಲಿ ನಮ್ಮ ಸರ್ಕಾರ ಬೇರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ. ನೇಮಕಾತಿ ಪ್ರಮಾಣವು ಹೆಚ್ಚಳವಾಗಿದೆ. ಪ್ರತಿ ವರ್ಷ ನಾಲ್ಕು ಐದು ಸಾವಿರ ಪೊಲಿಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಪೊಲೀಸರ ವಿಶ್ವಾಸಾರ್ಹತೆ ಹೆಚ್ಚಬೇಕಿದೆ. ಯಾವುದೇ ಭ್ರಷ್ಟಾಚಾರ ಆಗದಂತೆ ನೇಮಕಾತಿ ಆಗಬೇಕು. ಅದನ್ನು ನಾವು ಮಾಡುತ್ತೇವೆ. ತರಬೇತಿಯಲ್ಲಿ ಹೊಸ ತಂತ್ರಜ್ಞಾನದ ಪರಿಚಯ, ಸೈಬರ್ ಅಪರಾಧಗಳ ಕುರಿತು ತರಬೇತಿ ನೀಡುವ ಕೆಲಸ ಆಗಬೇಕು ಎಂದರು.
ಇದನ್ನೂ ಓದಿ:ದಾವಣಗೆರೆಯಲ್ಲಿ ಸಲಿಂಗಕಾಮಿ ಗೆಳತಿಯರ ಜಗಳ; ಬೇರೆ ಯುವತಿಯ ಜತೆ ಮಾತನಾಡಿದಳೆಂದು ಚಾಕು ಇರಿತ
ಪೊಲೀಸರ ತರಬೇತಿಗೆ ಪ್ರತ್ಯೇಕ ಕಮಾಂಡ್: ಕಳೆದ ಒಂದು ವರ್ಷದಲ್ಲಿ ಪೊಲಿಸ್ ಠಾಣೆಗಳ ನಿರ್ಮಾಣ ಹೆಚ್ಚಾಗಿದೆ. ಒಂದು ವರ್ಷದ ಅವಧಿಯಲ್ಲಿ ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ ನಿರ್ಮಾಣವಾಗಲಿದೆ. ಇನ್ಸ್ ಪೆಕ್ಟರ್ ಮತ್ತು ಡಿವೈ ಎಸ್ಪಿ ವರ್ಗಗಳ ಅಧಿಕಾರಿಗಳಿಗೆ ತರಬೇತಿ ಅಗತ್ಯವಿದೆ. ಅದಕ್ಕೆ ಪ್ರತ್ಯೇಕ ತರಬೇತಿ ಕಮಾಂಡ್ ನಿರ್ಮಿಸಲು ತೀರ್ಮಾನ ಮಾಡಲಾಗಿದೆ ಎಂದರು.
ಸುಧಾರಣೆಗೆ ಕ್ರಮ: ಪೊಲೀಸರ ತ್ಯಾಗ, ಬಲಿದಾನ ಹಾಗೂ ಸಾಧನೆಗಳನ್ನು ಜನರಿಗೆ ತಿಳಿಸಲು ಪೊಲೀಸ್ ವಸ್ತುಸಂಗ್ರಹಾಲಯ, ಎಟಿಎಸ್ ಬಲವರ್ಧನೆ, ಜೈಲುಗಳ ಸಂಖ್ಯೆ ಹಾಗೂ ಸಾಮರ್ಥ್ಯ ಹೆಚ್ಚಿಸಲಾಗುವುದಲ್ಲದೆ ಇನ್ನಷ್ಟು ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರ ಪೊಲೀಸರ ಜೊತೆಗಿದೆ: ಪೊಲೀಸರ ತ್ಯಾಗ ವ್ಯರ್ಥವಾಗದಂತೆ ಅದು ಸದಾ ಸ್ಮರಣೆಯಲ್ಲಿ ಇಡುವಂತೆ ಮಾಡುವುದು ನಮ್ಮ ಕೆಲಸ. ನಮ್ಮ ಸರ್ಕಾರ ಪೊಲೀಸರ ಜೊತೆ ಇರುತ್ತದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.