ಎ.ಜಿ. ಕೊಡ್ಗಿ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ
Team Udayavani, Jun 13, 2022, 6:46 PM IST
ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ರಾಜ್ಯ ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಕೊಡ್ಗಿ ಅವರು ಬೈಂದೂರು ಶಾಸಕರಾಗಿ, ನಂತರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಅವರ ರಾಜಕೀಯ ಜೀವನವೂ ಇತರರಿಗೆ ಮಾದರಿಯಾಗಿತ್ತು. ಪಕ್ಷದಲ್ಲಿ ಕರಾವಳಿ ಭಾಗದಲ್ಲಿ ಹಲವು ಯುವ ನಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಶ್ರೇಯ ಇವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಅವರ ನಿಧನದಿಂದ ಒಬ್ಬ ಸರಳ, ಸಜ್ಜನ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.