ಗ್ರಾಮೀಣ ಪ್ರದೇಶದಲ್ಲಿ ಸ್ಥಳದಲ್ಲಿಯೇ ತಪಾಸಣೆ -ಪರಿಹಾರ ನೀಡುವ ವ್ಯವಸ್ಥೆ ಅಗತ್ಯ: ಬೊಮ್ಮಾಯಿ
Team Udayavani, Jun 6, 2022, 1:01 PM IST
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ – ಮೊಬೈಲ್ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು.
ಈ ಬಾರಿಯ ಆಯವ್ಯಯದಲ್ಲಿ ಗಾಲಿಗಳ ಮೇಲೆ ಆಸ್ಪತ್ರೆ- ಗೆ ಸರ್ಕಾರ ಅನುದಾನ ಮೀಸಲಿರಿಸಿದೆ. ಬಸ್ ನಲ್ಲಿ ಪ್ರಯೋಗಾಲಯ ಹಾಗೂ ಆರೋಗ್ಯ ಸೇವಾ ಸೌಲಭ್ಯಗಳನ್ನು ನಾಲ್ಕು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಲಾಗುವುದು. ಪ್ರಯೋಗ ಯಶಸ್ವಿಯಾದರೆ, ಇನ್ನುಳಿದ ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕೆಂಬ ಚಿಂತನೆ ಇದೆ. ಆ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ ಎಂದು ವಿವಿಧ ಸಂಸ್ಥೆಗಳಿಗೆ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಜನರ ಆರೋಗ್ಯಕ್ಕಾಗಿ ಬಹಳಷ್ಟು ಸಂಘ ಸಂಸ್ಥೆಗಳು ಮುಂದಾಗಿವೆ. ಅವರೆಲ್ಲರನ್ನು ಸರ್ಕಾರ ಸ್ವಾಗತಿಸುತ್ತದೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರಿ ಕ್ಲಿನಿಕ್ ಉಪಯೋಗವನ್ನು ಮನಗಂಡು ಮೈಸೂರು, ಹುಬ್ಬಳ್ಳಿ- ಧಾರವಾಡ, ಮಂಗಳೂರು ಮಹಾನಗರ ಪಾಲಿಕೆಗಳಿಗೆ ಇವುಗಳನ್ನು ಆರೋಗ್ಯ ಇಲಾಖೆ ಹಸ್ತಾಂತರ ಮಾಡುತ್ತಿದೆ.
ಇನ್ಫೋಸಿಸ್ ಪ್ರತಿಷ್ಠಾನ ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ಬಹಳ ದೊಡ್ಡ ಪಾತ್ರವನ್ನು ರಾಜ್ಯದಲ್ಲಿ ವಹಿಸಿದೆ. ಜಯದೇವ ಸಂಸ್ಥೆಯಲ್ಲಿ 500 ಹಾಸಿಗೆಗಳ ಸಾಮರ್ಥ್ಯ ವುಳ್ಳ ಆಸ್ಪತ್ರೆಯನ್ನು ಒದಗಿಸಿದ್ದಾರೆ. ಕಿದ್ವಾಯಿ, ನಿಮ್ಹಾನ್ಸ್ ಸಂಸ್ಥೆಗಳಿಗೆ ಧರ್ಮ ಛತ್ರ ನಿರ್ಮಿಸಿ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು.
ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್: ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲೆಲ್ಲಿ ಆರೋಗ್ಯ ತಪಾಸಣೆಯ ಕೊರತೆ ಇರುವೆಡೆಗಳಲ್ಲಿ ಇಂತಹ ಸಂಚಾರಿ ಕ್ಲಿನಿಕ್ ಗಳನ್ನು ಒದಗಿಸಲಾಗುತ್ತಿರುವುದು ಒಳ್ಳೆಯ ನಡೆ. ಆರೋಗ್ಯ ಸೇವೆಗಳು ತಲುಪದೆ ಇರುವವರಿಗೆ ಈ ಸೇವೆಯನ್ನು ತಲುಪಿಸುವ ಉದ್ದೇಶದಿಂದ ರೋಟರಿ ಮತ್ತು ಇನ್ ಫೋಸಿಸ್ ಸಂಸ್ಥೆಯದ್ದಾಗಿದೆ. ಈ ಎರಡೂ ಸಂಸ್ಥೆಗೆ ಕೃತಜ್ಞತೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು, ಇದರ ಸದುಪಯೋಗವನ್ನು ಸರ್ಕಾರ ಮಾಡಿಕೊಳ್ಳಲಿದೆ ಎಂದರು. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಸಂಚಾರಿ ಕ್ಲಿನಿಕ್ ಇದಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಇದು ಉಪಯೋಗಕ್ಕೆ ಬರಲಿದೆ. ಇಂತಹ ಪ್ರಯೋಗಾಲಯಗಳ ಅವಶ್ಯಕತೆ ಇದೆ. ಈ ಬಗ್ಗೆ ಇನ್ಫೋಸಿಸ್ ಸೇರಿದಂತೆ ಹಲವು ಸಂಸ್ಥೆಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.