ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ ಎಂದ ಸಿಎಂ ಬೊಮ್ಮಾಯಿ
Team Udayavani, Sep 6, 2022, 12:17 PM IST
ಬೆಂಗಳೂರು: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಗ್ಗಿಲ್ಲದೆ ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಅನುಮತಿಗಳನ್ನು ನೀಡಿದ್ದಾರೆ. ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ. ಕೆರೆಗಳ ನಿರ್ವಹಣೆಯ ಬಗ್ಗೆ ಅವರು ಯೋಚಿಸಿಯೂ ಇಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಯಾಕೆ ಎಲೆಕ್ಷನ್ ಟಿಕೆಟ್ ಸಿಗುತ್ತದೆ? ಒಮ್ಮೆ ಯೋಚಿಸಿ: ರಮ್ಯಾ
ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದು 1500 ಕೋಟಿ ರೂ.ಗಳನ್ನು ಬಿಡು ಗಡೆ ಮಾಡಿದೆ. ನಿನ್ನೆ ಪುನಃ 300 ಕೋಟಿ ರೂ.ಗಳನ್ನು ಒತ್ತುವರಿ ತೆರೆವುಗೊಳಿಸಲು ನೀಡಲಾಗಿದೆ. ರಾಜಕಾಲುವೆಗಳಿಗೆ ಪಕ್ಕಾ ಕಟ್ಟಡ ಕಟ್ಟುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವೆಗೆ ಯಾವುದೇ ತೊಂದರೆ ಇಲ್ಲದಂತೆ ವ್ಯವಸ್ಥೆ ಮಾಡಲಾಗುವುದು. ಒತ್ತುವರಿಗೂ ಅವಕಾಶವಿಲ್ಲದಂತೆ ಎಚ್ಚರ ವಹಿಸಲಾಗುವುದು ಎಂದರು.
ನಿನ್ನೆ ಜಲಾವೃತವಾಗಿದ್ದ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ. ಕೆ ಹಳ್ಳಿ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಭೀಮೇಶ್ವರ ನದಿ ಉಕ್ಕಿ ಹರಿದು ಪಂಪ್ ಹೌಸ್ ಗೆ ನುಗ್ಗಿತ್ತು. 2 ಪಂಪ್ ಹೌಸ್ ಗಳಿಗೆ ಹಾನಿಯಾಗಿದ್ದು, ಒಂದು ಪಂಪ್ ಹೌಸ್ ನಲ್ಲಿದ್ದ ನೀರು ಹೊರಗೆ ಹಾಕಲಾಗಿದೆ. ಇಂದು ರಾತ್ರಿಯೊಳಗೆ 230 ಎಂ.ಎಲ್.ಡಿ ನೀರು ಸರಬರಾಜು ಪ್ರಾರಂಭವಾಗಲಿದೆ. 550 ಎಂ.ಎಲ್.ಡಿ ನೀರು ಸರಬರಾಜು ಮಾಡುವ ಪಂಪ್ ಹೌಸ್ ನ ನೀರನ್ನು ತೆಗೆಯಲು 2 ದಿನಗಳಾಗುತ್ತವೆ. ಈ ಮಧ್ಯೆ ಜಲಮಂಡಳಿಯ 8000 ಹಾಗೂ ಬಿಬಿಎಂಪಿ ವ್ಯಾಪ್ತಿಯ 4000 ಕೊಳವೆಬಾವಿಗಳನ್ನು ಸಕ್ರಿಯ ಗೊಳಿಸಲಾಗುವುದು ಹಾಗೂ ಟ್ಯಾಂ ಕರ್ ಮೂಲಕ ನೀರು ಸರಬರಾಜು ಮಾಡಲು ವ್ಯವಸ್ಥೆ ಕೈಗೊಳ್ಳಲಾಗುವುದು. ಇನ್ನೆರೆಡು ದಿನಗಳ ಕಾಲ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.