ಗಾಂಧಿ ಗ್ರಾಮ ಪುರಸ್ಕಾರ: ಪ್ರಸ್ತಾವನೆ ಪರಿಶೀಲನೆ ; ಸಿಎಂ ಬಸವರಾಜ ಬೊಮ್ಮಾಯಿ
Team Udayavani, Sep 15, 2022, 9:53 PM IST
ಬೆಂಗಳೂರು: 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಸೆ.12ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದ ವಿಷಯಕ್ಕೆ ಗುರುವಾರ ಸದನಕ್ಕೆ ಉತ್ತರ ನೀಡಿರುವ ಮುಖ್ಯಮಂತ್ರಿಯವರು 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪ್ರತಿ ತಾಲೂಕಿಗೆ ಒಂದರಂತೆ ಒಟ್ಟು 176 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಪುರಸ್ಕಾರ ಅನುದಾನ ನೀಡಿರುವುದಿಲ್ಲ. 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
ಪಂಚಾಯತ್‌ಗಳ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ವೇಗವನ್ನು ಹೆಚ್ಚಿಸಲು ಪಂಚಾಯತ್‌ರಾಜ್ ಸಂಸ್ಥೆಗಳಿಗೆ ಹಲವಾರು ಪ್ರೋತ್ಸಾಹಕ ಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರ ಭಾಗವಾಗಿ 2013-14ರಿಂದ ಉತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾ.ಪಂ.ಗಳಿಗೆ ತಾಲೂಕಿಗೆ ಒಂದರಂತೆ ಗಾಂಧಿ ಗ್ರಾಮ ಪುರಸ್ಕಾರ ನೀಡುವ ಯೋಜನೆ ತರಲಾಯಿತು. ಆಯ್ಕೆಯಾದ ಗ್ರಾ.ಪಂ.ಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಕ ಅನುದಾನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಯವರು ಉತ್ತರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.