ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ: ಸಿಎಂ ಬೊಮ್ಮಾಯಿ
Team Udayavani, Mar 22, 2022, 11:24 AM IST
ಬೆಂಗಳೂರು: ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡುತ್ತಿದ್ದಾರೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಮ್ಮ ಪರವಾಗಿ ಆದೇಶ ನೀಡಿದ್ದಾರೆ, ಅದರ ತಮಿಳುನಾಡು ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಯಾವುದೇ ಬೆಲೆ ಇಲ್ಲ ಹಾಗೂ ಕಾನೂನಿನ ಪ್ರಕಾರವೂ ಇಲ್ಲ. ರಾಜಕೀಯ ತಂತ್ರವಷ್ಟೇ ಎಂದರು. ಈ ರೀತಿಯ ಹತ್ತು ಹಲವಾರು ನಿರ್ಣಯಗಳಾಗಿವೆ. ಅದಕ್ಕೆ ಬೆಲೆ ಇಲ್ಲ ಎಂದರು.
ಇದನ್ನೂ ಓದಿ:ಏಪ್ರಿಲ್ ನಲ್ಲಿ ಸಂಪುಟ ಸರ್ಜರಿ; ದಲಿತ ಸಮುದಾಯದ ನಾಯಕರಿಗೆ ರಾಜ್ಯಾಧ್ಯಕ್ಷ ಪಟ್ಟ?
ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ ತೆಗೆದುಗೊಳ್ಳಲಿದೆ ಎಂದರು.
ದಿಕ್ಕು ಬದಲಾಯಿಸಲು ಹೇಳಿಕೆ: ಶಿವಸೇನೆ ನಾಯಕ ಸಂಜಯ ರಾವತ್ ಅವರು ಬೆಳಗಾವಿ ಫೈಲ್ಸ್ ಬರಬೇಕು ಅಲ್ಲಿಯೂ ಅನೇಕ ಘಟನೆಗಳು ನಡೆದಿವೆ ಎಂದು ಆರೋಪಿಸಿರುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ವಿಷಯದ ಬಗ್ಗೆ ಈಗಾಗಲೇ ತೀರ್ಪು ನೀಡಲಾಗಿದೆ. 1956 ನಲ್ಲಿ ರಾಜ್ಯ ಪುನರ್ ವಿಂಗಡಣೆ ಆಯೋಗದ ಅನುಗುಣವಾಗಿ ಆಗಿದೆ. ಕನ್ನಡ ಮಾತನಾಡುವ ಸೊಲ್ಲಾಪುರ, ಅಕ್ಕಲ್ ಕೋಟೆ ಭಾಗಗಳು ಮಹಾರಾಷ್ಟ್ರದಲ್ಲಿ ಉಳಿದಿವೆ. ಈ ರೀತಿ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಬೆಳಗಾವಿ ಹೆಸರಿನಲ್ಲಿ ಅಲ್ಲಿರುವ ಸಮಸ್ಯೆಗಳ ದಿಕ್ಕು ಬದಲಾಯಿಸಲು ಈ ಕೆಲಸವನ್ನು ಮಾತನಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.