ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಿಯಿಂದ ಶಂಕುಸ್ಥಾಪನೆ: ಸಿಎಂ ಬೊಮ್ಮಾಯಿ

Team Udayavani, Jun 7, 2022, 8:53 AM IST

ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಿಯಿಂದ ಶಂಕುಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಜೂ.20 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ, 15000 ಕೋಟಿ ರೂ.ಗಳ ಸಬ್ ಅರ್ಬನ್ ರೈಲಿಗೆ ಅಡಿಗಲ್ಲು ಹಾಕಲಿದ್ದಾರೆ. ಈ ಮೂಲಕ ಬೆಂಗಳೂರಿನ ಬಹಳ ದಿನಗಳ ಕನಸು ನನಸಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೃಹತ್ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಸೌಲಭ್ಯಗಳಿರುವ ನಗರವಾಗಿ ಅಭಿವೃದ್ಧಿಗೊಳಿಸಲಾಗುವುದು. ಬೆಂಗಳೂರಿನ ಅಭಿವೃದ್ಧಿಗೆ ದಕ್ಷ ಮಂತ್ರಿಗಳ, ಶಾಸಕರ ದೊಡ್ಡ ತಂಡ ನಮ್ಮೊಂದಿಗಿದೆ. ಆಧುನಿಕವಾಗಿರುವ ಬೆಸ್ಟ್ ಬೆಂಗಳೂರನ್ನು ನಿರ್ಮಿಸಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಆಯವ್ಯಯದಲ್ಲಿ  ದೊಡ್ಡ ಮೊತ್ತದ ಅನುದಾನವನ್ನು ಮೀಸಲಿರಿಸಿದೆ. 7000 ಶಾಲಾ ಕೊಠಡಿಗಳನ್ನು ಈ ವರ್ಷ ನಿರ್ಮಿಸಲಾಗುತ್ತಿದೆ. ಬೆಂಗಳೂರಿಗೆ 6000 ಕೋಟಿ ರೂ.ಗಳ ನಗರೋತ್ಥಾನ ಯೋಜನೆಯ ಜೊತೆಜೊತೆಗೆ ಮಳೆ ಬಂದಾಗ ಸಮಸ್ಯೆಯಾಗುವ ಚರಂಡಿಗಳಿಗೆ 1600 ಕೋಟಿ ರೂ.ಗಳ ಅನುದಾನ ನೀಡಿದೆ. ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಅದಲ್ಲದೆ, ವಿವಿಧ ಕಾರ್ಯಕ್ರಮಗಳಡಿಯಲ್ಲಿ ಸುಮಾರು 1000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ.  ಪೆರಿಫೆರಲ್ ರಿಂಗ್ ರೋಡ್ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಜನರಿಗೆ ಅಗತ್ಯವಿರುವ ಯೋಜನೆಗಳ ಆದೇಶಗಳನ್ನು ಕೆಲವೇ ದಿನಗಳಲ್ಲಿ ನೀಡಲಾಗುವುದು. ದೊಡ್ಡ ಪ್ರಮಾಣದಲ್ಲಿ ವಿದೇಶೀ ಹೂಡಿಕೆದಾರರು ಇಲ್ಲಿ ಹೂಡಿಕೆ ಮಾಡಲು ಉತ್ಸುಕರಾಗಿದ್ದಾರೆ. ಇಂದು 52 ಸಾವಿರ ಕೋಟಿ ರೂ.ಗಳ ಯೋಜನೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಇದು ನಮ್ಮ ಕರ್ನಾಟಕ ಮತ್ತು ಬೆಂಗಳೂರಿನ ಶಕ್ತಿ ಎಂದರು.

ಇದನ್ನೂ ಓದಿ:ಮಂಕಿಪಾಕ್ಸ್ ಸೋಂಕು ಭೀತಿ: ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲು ಸರ್ಕಾರದ ಸೂಚನೆ

ಬೆಂಗಳೂರಿನ ಅಭಿವೃದ್ಧಿ ನಮ್ಮ ಕರ್ತವ್ಯ. ಜನರ ಆಶೀರ್ವಾದದಿಂದ ಜನಸೇವೆ ಮಾಡುವ ಅವಕಾಶ ನಮಗೆ ದೊರೆತಿದೆ. ನಿರಂತರವಾಗಿ 40 ವರ್ಷಗಳ ಅಧಿಕಾರವನ್ನು ನಂಬದೇ ಜನರ ಸೇವೆಯೇ ಅಧಿಕಾರ ಎಂದು ನಂಬಿ ಕೆಲಸ ಆಡುತ್ತಿರುವ ವಿ.ಸೋಮಣ್ಣ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ.  ಬಸ್ ನಿಲ್ದಾಣದಲ್ಲಿ ಬಹುಪಯೋಗಿ ಕಟ್ಟಡವನ್ನು ನಿರ್ಮಿಸಲಾಗಿದೆ. ಇದು ಜನರ ಬಗ್ಗೆ ಕಳಕಳಿ ಇರುವ ವ್ಯಕ್ತಿಗೆ ಮಾತ್ರ ಸಾಧ್ಯ ಎಂದರು.

ಬೆಂಗಳೂರಿನ ಯೋಜನಾಬದ್ಧ ಅಭಿವೃದ್ಧಿ: ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡುವ ಸಂಕಲ್ಪವನ್ನು ನಾವು ಮಾಡಿದ್ದೇವೆ. ಬೃಹತ್ ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಬೇಕು. ಅದಕ್ಕಾಗಿ 6000 ಕೋಟಿ ರೂ.ಗಳ ವೆಚ್ಚದಲ್ಲಿ ನಗರೋತ್ಥಾನ, 1500 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ ಕಾಲುವೆ ನಿರ್ಮಾಣ,  ಮೆಟ್ರೋ, ಸಬ್ ಅರ್ಬನ್ ರೈಲು, 12 ಕಾರಿಡಾರ್‍ಗಳ ಅಭಿವೃದ್ಧಿ, ಅಮೃತ್ ಯೋಜನೆಗಳಡಿ 75 ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿ ಸೇರಿದಂತೆ ಹಲವಾರು ಯೋಜನೆಗಳನ್ನು ಬೆಂಗಳೂರಿಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಆರ್ ಅಂಡ್ ಡಿ ಕೇಂದ್ರಗಳಿವೆ. 500 ಫಾರ್ಚೂನ್ ಕಂಪನಿಗಳ ಪೈಕಿ 400 ಇಲ್ಲಿವೆ.  ದಾವೋಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ 60 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು  ಕೈಗಾರಿಕೆಗಳಿಗೆ ಅನುಮೋದನೆ ನೀಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಅಭಿವೃದ್ಧಿ ಆಗಲಿದೆ. ಆರು ಹೊಸ ಯೋಜನಾಬದ್ಧವಾಗಿ ಎಲ್ಲಾ ಸೌಲಭ್ಯಗಳಿರುವ ನಗರಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಹೊಸ ಕಲ್ಪನೆ ಇಟ್ಟುಕೊಂಡು ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಮಾಡಲಾಗುತ್ತಿದೆ. ಕರ್ನಾಟಕದ ಭವ್ಯ ಭವಿಷ್ಯ ಬರೆಯುವ ಶಕ್ತಿ, ನಿಮ್ಮ ಭಾಗ್ಯದ ಬಾಗಿಲನ್ನು ತೆರೆಯುವ ಶಕ್ತಿ ನಿಮ್ಮ ಆಶೀರ್ವಾದದಲ್ಲಿದೆ ಎಂದರು

ಟಾಪ್ ನ್ಯೂಸ್

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.