ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ- ಬಸವರಾಜ ಬೊಮ್ಮಾಯಿ
Team Udayavani, Sep 28, 2022, 9:45 AM IST
ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಸೆ.28(ಬುಧವಾರ) ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.