ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ಮಾತುಕತೆ ನಡೆಸಿದ ಸಿಎಂ ಬೊಮ್ಮಾಯಿ
Team Udayavani, Mar 3, 2022, 3:06 PM IST
ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಖಾರ್ಕೀವ್ ದಿಂದ 30 ಕಿಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ ಎಂದು ವಿದ್ಯಾರ್ಥಿಗಳು ತಮ್ಮ ಪರಿಸ್ಥಿತಿಯನ್ನು ವಿವರಿಸಿದರು.
ಇದನ್ನೂ ಓದಿ:ಕಂಡವರ ಜೇಬು ಭರ್ತಿ ಮಾಡುವ ‘ನೀಟ್’ ದಂಧೆಗೆ ಚರಮಗೀತೆ ಹಾಡುತ್ತೇವೆ: ಎಚ್ ಡಿ ಕುಮಾರಸ್ವಾಮಿ
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿ, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಮಾತನಾಡುತ್ತೇನೆ. ನಿಮಗೆ ಎಲ್ಲಾ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಗೋಪಾಲಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.