ಕೋವಿಡ್ 19 ನಿರ್ವಹಣೆ ಕುರಿತು ಶಾಸಕರು, ಸಂಸದರೊಂದಿಗೆ ಸಿಎಂ ಬಿಎಸ್ ವೈ ಸಂವಾದ


Team Udayavani, May 29, 2021, 2:59 PM IST

ಕೋವಿಡ್ 19 ನಿರ್ವಹಣೆ ಕುರಿತು ಶಾಸಕರು, ಸಂಸದರೊಂದಿಗೆ ಸಿಎಂ ಬಿಎಸ್ ವೈ ಸಂವಾದ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಸಂಸದರು ಮತ್ತು ಶಾಸಕರೊಂದಿಗೆ ವಿಡಿಯೊ ಸಂವಾದ ನಡೆಸಿ, ಕೋವಿಡ್ 19 ಸೋಂಕು ತಡೆಗಟ್ಟುವ ಕುರಿತಂತೆ ಚರ್ಚೆ ನಡೆಸಿದರು.

ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಮರಣ ಪ್ರಮಾಣ ರಾಜ್ಯದಲ್ಲಿ 1.7 % ಇದ್ದು, ಇದನ್ನು ಕಡಿಮೆ ಮಾಡುವಂತೆ ಸಿಎಂ ಸೂಚಿಸಿದರು.

ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇ. 60 ಪ್ರಕರಣಗಳು ವರದಿಯಾಗುತ್ತಿದೆ. ಇದನ್ನು ಕಡಿಮೆಗೊಳಿಸಬೇಕು, ಮರಣ ಪ್ರಮಾಣವೂ ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದನ್ನೂ ಓದಿ:ಮನೆಯಲ್ಲೇ ಪ್ರತ್ಯೇಕವಾಗುಳಿದೆ, ಪೂರ್ಣ ಎಚ್ಚರಿಕೆಯಿಂದ ಹೋರಾಡಿ ಗೆದ್ದೆ

ಕೋವಿಡ್ 19ರ ಎರಡನೇ ಅಲೆ, ನಿರೀಕ್ಷೆಗೂ ಮೀರಿ ತೀವ್ರವಾಗಿ ಬಾಧಿಸಿದೆ. ಆದರೆ ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಸಮಾಧಾನದ ಸಂಗತಿ. ಕೋವಿಡ್ 19 ಸೋಂಕು ತೀವ್ರವಾಗಿದ್ದಾಗ ಎಲ್ಲ ಜನಪ್ರತಿನಿಧಿಗಳೂ ಅಧಿಕಾರಿಗಳೊಂದಿಗೆ ಕೈಜೋಡಿಸಿ, ಸೋಂಕು ನಿಯಂತ್ರಣಕ್ಕೆ ಶ್ರಮಿಸಿದ್ದಕ್ಕೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಆದರೆ ಪ್ರಕರಣ ಕಡಿಮೆಯಾಗುತ್ತಿರುವ ಕುರಿತು ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಕುರಿತು ನಾವು ಹೆಚ್ಚಿನ ಗಮನ ಹರಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಬದಲು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಲು ಮನವೊಲಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಸಕಾಲದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇದರಿಂದ ಮರಣ ಪ್ರಮಾಣ ಕಡಿಮೆಯಾಗುವುದು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳು, ಔಷಧ, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ಸಂಪನ್ಮೂಲಗಳ ದಕ್ಷ ಬಳಕೆಯನ್ನು ಖಾತರಿಪಡಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಆಶಾ ಕಾರ್ಯಕರ್ತೆಯರಿಗೆ ಶೀಘ್ರವೇ ವೇತನ: ಸಂವಾದದಲ್ಲಿ ಭಾಗವಹಿಸಿದ ಶಾಸಕರು, ಸಂಸದರು, ಕೋವಿಡ್ 19 ನಿರ್ವಹಣೆ ಜೊತೆಗೆ ತಳಹಂತದ ಹಲವಾರು ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ಇವುಗಳನ್ನು ಶೀಘ್ರವೇ ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು. ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡಗಡೆಗೆ ಈಗಾಗಲೇ ಕ್ರಮ ವಹಿಸಲಾಗಿದ್ದು, ಎರಡು ಮೂರು ದಿನಗಳಲ್ಲಿಯೇ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಸರ್ಕಾರವು ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂ. ಗಳನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡಲು ಅನುಮತಿ ನೀಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯಿತಿಗಳಿಗೆ ತಲಾ 50 ಸಾವಿರ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಸಭೆಯಲ್ಲಿ ವೈದ್ಯರ ಕೊರತೆ ಕುರಿತು ಚರ್ಚೆ ನಡೆಯಿತು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಈಗಾಗಲೇ 1200 ವೈದ್ಯರ ನೇಮಕ ಮಾಡಿಕೊಳ್ಳುತ್ತಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.