ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇ. 50 ಹಾಸಿಗೆ ಒದಗಿಸಲು ಬಿಎಸ್ ವೈ ಸೂಚನೆ
Team Udayavani, Jul 18, 2020, 6:03 PM IST
ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಇನ್ನೂ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಸಿಎಂ ಬಿಎಸ್ ವೈ ಚರ್ಚೆ ನಡೆಸಿದರು.
ಕೆಲವೆಡೆಗಳಲ್ಲಿ ಕೋವಿಡ್ ಹಾಗೂ ಕೋವಿಡ್ ಅಲ್ಲದ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಹಾಗೆಯೇ ಕೋವಿಡ್‍ಗೆ ಚಿಕಿತ್ಸೆ ಅಗತ್ಯವಿರುವವರು ಹಾಗೂ ಇತರ ಸಮಸ್ಯೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ದೊರೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವ ಹಾಗೂ ಹಲವರು ಪ್ರಾಣ ತ್ಯಾಗ ಮಾಡಿದ ಘಟನೆಗಳು ಮುಂದೆ ನಡೆಯಬಾರದು, ಕೋವಿಡ್ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿಯಾಗಿತ್ತು. ಮುಂದೆಯೂ ಮಾದರಿಯಾಗಿರಬೇಕು ಎಂಬ ಆಶಯ ವ್ಯಕ್ತಪಡಿಸಿದರು.
ಹಿಂದಿನ ಸಭೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2 ಸಾವಿರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 4,500 ಹಾಸಿಗೆಗಳು ದೊರೆಯುವುದು ಎಂದು ಒಮ್ಮತದ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಅಷ್ಟು ಸಂಖ್ಯೆಯ ಹಾಸಿಗೆಗಳನ್ನು ಒದಗಿಸದೆ ಇರುವುದು ಹಾಗೂ ಇನ್ನೂ ಅನೇಕ ಸಮಸ್ಯೆಗಳು ನಮ್ಮ ಸಚಿವರುಗಳು ಕೆಲವು ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿದಾಗ ತಿಳಿದುಬಂದಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿದರು.
ಇಂದಿನ ಈ ತುರ್ತು ಸಂದರ್ಭದಲ್ಲಿ ಮಾನವೀಯತೆಯಿಂದ ಕೋವಿಡ್ ಚಿಕಿತ್ಸೆಗೆ ಸಹಕರಿಸಬೇಕು. ಕೋವಿಡ್ ಇಲ್ಲದ ಇತರ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸದೆ, ರಾಜ್ಯದ ವೈದ್ಯಕೀಯ ವ್ಯವಸ್ಥೆಯಲ್ಲಿ ಸಮತೋಲನ ಇರುವಂತೆ ಎಚ್ಚರ ವಹಿಸಬೇಕು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಸಲಹೆ ಮಾಡಿದರು.
ಇದಲ್ಲದೆ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ. 50 ರಷ್ಟು ಹಾಸಿಗೆಗಳನ್ನು ನಾಳೆಯಿಂದಲೇ ಕೋವಿಡ್ ಚಿಕಿತ್ಸೆಗೆ ಒದಗಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಮವೈದ್ಯರು, ನರ್ಸ್ ಗಳ ಕೊರತೆ ಇದ್ದರೆ, ಸರ್ಕಾರವೇ ನೇಮಕ ಮಾಡುವುದು. ಯಾವುದೇ ರೀತಿಯ ಬೆಂಬಲ ಅಗತ್ಯವಿದ್ದರೂ ಸರ್ಕಾರ ನೀಡಲಿದೆ ಎಂದು ಸಿಎಂ ಭರವಸೆ ನೀಡಿದರು.
ಇದಕ್ಕೆ ಸ್ಪಂದಿಸಿದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ. 50 ರಷ್ಟು, ಇನ್ನು ಕೆಲ ಕಾಲೇಜುಗಳು ಶೇ. 80 ರಷ್ಟು ಹಾಸಿಗೆಗಳನ್ನು ನೀಡುವುದಾಗಿ ಹಾಗೂ ಲಭ್ಯವಿರುವ ವೆಂಟಿಲೇಟರ್ ಗಳನ್ನು ಸಹ ಒದಗಿಸುವುದಾಗಿ ತಿಳಿಸಿದರು.
ಇನ್ನು ಕಾಲೇಜುಗಳ ಬೆಡ್ ಗಳ ಮೇಲೆ ನಿಗಾ ಇಡಲು ಅಧಿಕಾರಿಗಳನ್ನು ಈಗಾಗಲೇ ನೇಮಕ ಮಾಡಲಾಗಿದೆ. ಸಭೆಗೆ ಹಾಜರಾಗದ ವೈದೇಹಿ ವೈದ್ಯಕೀಯ ಕಾಲೇಜಿಗೆ ನೋಟಿಸ್ ನೀಡಲು ಸೂಚಿಸಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.