ಸಿಎಂ ಬದಲಾವಣೆ ಊಹಾಪೋಹ : ತೇಲ್ಕೂರ
Team Udayavani, May 29, 2021, 1:51 PM IST
ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಊಹಾಪೋಹ ಬದಲಾವಣೆ ಬರೀ ಊಹಾಪೋಹ ಎಂದು ಬಿಜೆಪಿ ರಾಜ್ಯ ವಕ್ತಾರರಾಗಿರುವ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದರು.
ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಯಾವುದಕ್ಕೂ ಕಿವಿಗೊಡದೆ ಕ್ಷೇತ್ರದಲ್ಲಿ ಕೊರೊನಾ ವಿರುದ್ಧ ಹೋರಾಡಿ ಎಂದು ನಮ್ಮ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿ ಹೇಳಿದ್ದಾರೆ.
ಕೊರೊನಾ ವಿರುದ್ಧ ಪ್ರಭಲ ಹೋರಾಟ ನಡೆಯುತ್ತಿರುವ ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಅಪ್ರಸ್ತುತ. ಯಡಿಯೂರಪ್ಪ ಅವರೇ ನಮ್ಮ ಪ್ರಶ್ನಾತೀತ ನಾಯಕರು. ಅವರ ನೇತೃತ್ವದಲ್ಲಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ತೇಲ್ಕೂರ ವಿವರಣೆ ನೀಡಿದರು.
ಸಚಿವ ಯೋಗೇಶ್ವರ ಅವರನ್ನ ಸಂಪುಟದಿಂದ ಕೈ ಬಿಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದಾಗಿದೆ. ಯಾರನ್ನ ಕೈ ಬಿಡಬೇಕು. ಯಾರನ್ನ ತಗೊಬೇಕು ಎನ್ನುವುದು ಸಿಎಂ ಪರಮಾಧಿಕಾರ ಎಂದು ಹೇಳಿದರು.
ಮೋದಿ ಆಡಳಿತಕ್ಕೆ ಏಳು ವರ್ಷ: ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಮೇ 30ಕ್ಕೆ ಏಳು ವರ್ಷಗಳಾಗುತ್ತಿದೆ.
ಹೀಗಾಗಿ ಬಿಜೆಪಿ ಪಕ್ಷದಿಂದ ಸಂಭ್ರಮಾಚರಣೆ ಬದಲು ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರಿಂದ ರಕ್ತದಾನ ಶಿಬಿರ ಹಾಗೂ ಕಷ್ಟದಲ್ಲಿ ರುವ ಜನರಿಗೆ ಊಟ ಜತೆಗೇ ಇತರ ಸೇವೆಗಳನ್ನು ಕಲ್ಪಿಸಲು ಹತ್ತಾರು ಕಾರ್ಯಗಳನ್ನು ರೂಪಿಸಲಾಗಿದೆ. ಹೂವು, ಕಲ್ಲಂಗಡಿ ಸೇರಿ ಇತರ ತೊಟಗಾರಿಕಾ ಬೆಳೆಗಳಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ಯಾವುದೇ ಪ್ರಚಾರವಿಲ್ಲದೇ ಆರ್ಥಿಕ ಸಹಾಯ ಕಲ್ಪಿಸುವುದು ಸೇರಿದಂತೆ ಇತರ ನಿಟ್ಟಿನ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಣೆ ನೀಡಿದರು.
ಎಲ್ಲ ಭೂತಗಳಲ್ಲಿ ಬಿಜೆಪಿ ಕಾರ್ಯಕರ್ತರು ತಪ್ಪದೇ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಲ್ಲದೇ ಪ್ರಮುಖವಾಗಿ ಕೊರೊನಾ ನಿಯಂತ್ರಣ ಕ್ಕೆ ಕೈ ಜೋಡಿಸುವರು ಎಂದು ತೇಲ್ಕೂರ ವಿವರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜೀ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.