ಸಿಎಂ ಹಿರಿಯ ಸಹೋದರಿ ನಿಧನ
Team Udayavani, Oct 8, 2017, 11:43 AM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿರಿಯ ಸಹೋದರಿ ಚಿಕ್ಕಮ್ಮ (90)ವಯೋಸಹಜ
ಅನಾರೋಗ್ಯದಿಂದ ಶುಕ್ರವಾರ ತಡರಾತ್ರಿ ನಿಧನರಾದರು. ಲೇ.ಸಣ್ಣೇಗೌಡರ ಪತ್ನಿಯಾದ ಚಿಕ್ಕಮ್ಮ ಅನಾರೋಗ್ಯದ
ಕಾರಣ ಕೆಲ ದಿನಗಳ ಹಿಂದೆ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಸಿದ್ದರಾಮನಹುಂಡಿ ಪಕ್ಕದ ದೇವೇಗೌಡನ ಹುಂಡಿಯಲ್ಲಿ ನೆರವೇರಿತು.
ಸಿಎಂ ಸಂತಾಪ: ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಸಿಎಂ ಸಿದ್ದರಾಮಯ್ಯ ಅಂತ್ಯಕ್ರಿಯೆಯಲ್ಲಿ
ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ನಮ್ಮದು ಅವಿಭಕ್ತ ಕುಟುಂಬ. ಹೀಗಾಗಿ ನಮ್ಮ ಅಕ್ಕನ
ಮಕ್ಕಳು ದೊಡ್ಡವರಾಗುವರೆಗೂ ನಮ್ಮ ಜತೆಗೇ ಇದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ಭೇಟಿ
ಮಾಡಿದ್ದೆ ಎಂದು ಸಿದ್ದರಾಮಯ್ಯ ನೆನೆದರು.
ಶಾಸಕ ಪುಟ್ಟರಂಗಶೆಟ್ಟಿ, ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಸಿದ್ದರಾಜು, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಮಾಜಿ ಶಾಸಕ ಸತ್ಯನಾರಾಯಣ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.
ವಿಜಯಶಂಕರ್ ಭಾಗಿ: ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್
ಸೇರ್ಪಡೆಗೊಳ್ಳುವ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿರುವ ಬೆನ್ನಲ್ಲೆ ಶನಿವಾರ ದೇವೇಗೌಡನಹುಂಡಿಯಲ್ಲಿ ಕಾಣಿಸಿಕೊಂಡರು. ಸಿಎಂ ಸಿದ್ದರಾಮಯ್ಯ ಅವರ ಸಹೋದರಿ ಚಿಕ್ಕಮ್ಮ ಅವರ ಅಂತಿಮ ದರ್ಶನ ಪಡೆದು, ಸ್ಥಳದಲ್ಲಿದ್ದ ಕೆಲವು ಕಾಂಗ್ರೆಸ್ ಮುಖಂಡರೊಂದಿಗೆ ಗುರುತಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್ ಸಿಂಹ
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
BYV ಬಣಕ್ಕೆ ಸೆಡ್ಡು: ದಾವಣಗೆರೆಯಲ್ಲಿ ಯತ್ನಾಳ್ ತಂಡದಿಂದಲೂ ಬೃಹತ್ ಸಮಾವೇಶ ಯೋಜನೆ
ಪದ್ಮನಾಭ ತೀರ್ಥರ ಆರಾಧನೆ; ಮಂತ್ರಾಲಯ ಶ್ರೀ ಹೇಳಿಕೆಗೆ ಉತ್ತರಾದಿ ಮಠ ಆಕ್ಷೇಪ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.