Congress ಭಿನ್ನಾಭಿಪ್ರಾಯ ಶಮನಕ್ಕಿಳಿದ ಸಿಎಂ ಸಿದ್ದರಾಮಯ್ಯ

ಸಮನ್ವಯ ಅಖಾಡಕ್ಕೆ ಇಳಿದ ಸಿಎಂ

Team Udayavani, Aug 8, 2023, 7:05 AM IST

Congress ಭಿನ್ನಾಭಿಪ್ರಾಯ ಶಮನಕ್ಕಿಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಚಿವರು ಮತ್ತು ಶಾಸಕರ ನಡುವಿನ ಅಂತರ ಹಾಗೂ ಭಿನ್ನಾಭಿಪ್ರಾಯ ಶಮನಕ್ಕೆ ಸ್ವತಃ ಅಖಾಡಕ್ಕೆ ಇಳಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಜತೆ ಸಂವಾದ ಪ್ರಾರಂಭಿಸಿದ್ದು, ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಪಕ್ಷದ ಒಗ್ಗಟ್ಟು ಸಡಿಲವಾಗದಂತೆ ತಂತ್ರಗಾರಿಕೆ ನಡೆಸಿದ್ದಾರೆ.

ಒಂದೆಡೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಶಾಸಕರ ಸಿಡುಕು, ಇನ್ನೊಂದೆಡೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ದು ಮಾಡಿದ ಪತ್ರ ಸಮರದ ಜತೆಗೆ ಸರಕಾರದ ವರ್ಚಸ್ಸು ಕಾಪಾಡುವಂತೆ ದಿಲ್ಲಿಯಲ್ಲಿ ವರಿಷ್ಠರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಸಮನ್ವಯ ಸಾಧನೆಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಜತೆ ಸೇರಿ ಅಭಿಪ್ರಾಯ ಸಂಗ್ರಹ ಪ್ರಾರಂಭಿಸಿದ್ದಾರೆ. ಈ ಪ್ರಯತ್ನದ ಮೊದಲ ಭಾಗವಾಗಿ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ, ಧಾರವಾಡ ಜಿಲ್ಲೆಯ ಶಾಸಕ ರೊಂದಿಗೆ ಚರ್ಚೆ ನಡೆಸಲಾಗಿದೆ. ಈ ವಾರ ಪೂರ್ತಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಶಾಸಕಾಂಗ ಪಕ್ಷದ ಸಭೆಗೆ ಮುನ್ನ ನಡೆದ ಪತ್ರ ಸಮರ ಹಿನ್ನೆಲೆಯಲ್ಲಿ ಈ ಸಭೆ ವಿಶೇಷವಾಗಿ ಗಮನ ಸೆಳೆದಿತ್ತು. ಆದರೆ ಅಸಮಾಧಾನಿತ ಶಾಸಕರು ಇಂದಿನ ಸಭೆಯಲ್ಲಿ ಉಪಸ್ಥಿತ ರಿರಲಿಲ್ಲವಾದ್ದರಿಂದ ಮೊದಲ ದಿನದ ಚರ್ಚೆ ಸುಸೂತ್ರವಾಗಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಎದುರು ಕುಳ್ಳಿರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಿಗೆ ಮಾತನಾಡುವಂತೆ ಸೂಚಿಸಿದ್ದರಿಂದ ಆರೋಪ- ಪ್ರತ್ಯಾರೋಪಕ್ಕೆ ಅವಕಾಶವಿರಲಿಲ್ಲ.

ಸಚಿವರು ಹಾಗೂ ಶಾಸಕರ ಹೊಂದಾಣಿಕೆ ಬಗ್ಗೆ ಸಭೆಯಲ್ಲಿ ಪಾಠ ಮಾಡಿದ ಸಿದ್ದರಾಮಯ್ಯ, ಲೋಕಸಭಾ ಚುನಾ ವಣೆ ಹೊಸ್ತಿಲಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು. ವಿಪಕ್ಷಗಳ ಬಾಯಿಗೆ ಆಹಾರವಾಗಬಾರದು. ಹೊಂದಾ ಣಿಕೆಯ ಜತೆಗೆ ಲೋಕಸಭಾ ಚುನಾ ವಣೆಗೆ ಇಂದಿನಿಂದಲೇ ಕೆಲಸ ಮಾಡ ಬೇಕು ಎಂದು ಸಲಹೆ ನೀಡಿದರು.

ಅನುದಾನಕ್ಕೆ ಕಾಯಬೇಕು
ಎಲ್ಲ ಜಿಲ್ಲೆಯ ಶಾಸಕರು ಸಭೆಯಲ್ಲಿ ಕ್ಷೇತ್ರಾಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮಾಡಿದ ಮನವಿಗೆ ಸಿಎಂ ಸಿದ್ದರಾಮಯ್ಯ “ಕಾಯುವಿಕೆ’ಯ ಪಾಠ ಮಾಡಿದ್ದಾರೆ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಗೆ ಬದ್ಧವಾಗಿದೆ. 5 ಗ್ಯಾರಂಟಿಗಳ ಅನುಷ್ಠಾನ ಸಮರ್ಪಕವಾಗಿ ನಡೆಯುತ್ತಿದೆಯೋ ಇಲ್ಲವೋ ಎಂಬುದನ್ನು ವರಿಷ್ಠರು ಹಾಗೂ ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ. ಹೀಗಾಗಿ ಈ ಐದು ಯೋಜನೆಗಳಿಗೆ ಆದ್ಯತೆ ನೀಡಲೇಬೇಕಿದೆ. ಇದರ ಅರ್ಥ ನಿಮ್ಮ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂದಲ್ಲ. ಆದರೆ ಸದ್ಯಕ್ಕೆ ವಿಶೇಷ ಅನುದಾನ ನೀಡಲು ಸಾಧ್ಯವಿಲ್ಲ. ಮುಂದಿನ ಬಜೆಟ್‌ವರೆಗೆ ಅಂದರೆ ಇನ್ನು 8 ತಿಂಗಳು ಕಾಯಬೇಕಾಗುತ್ತದೆ. ಗ್ಯಾರಂಟಿಯ ಜತೆಗೆ ಅಭಿವೃದ್ಧಿ ಕಾರ್ಯಗಳು ಹಿಂದೆ ಬೀಳುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂಬ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.

ಕ್ಷೇತ್ರವಾರು ತನಿಖೆ ನಡೆಸಿ
ಹಿಂದಿನ ಸರಕಾರದ ಅವಧಿಯಲ್ಲಿ ನಡೆದ ಹಗರಣದ ಬಗ್ಗೆ ಕ್ಷೇತ್ರವಾರು ತನಿಖೆ ನಡೆಸುವಂತೆ ಕೆಲವು ಶಾಸಕರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು. ಚುನಾವಣೆಗೆ ಮುನ್ನ ನಾವು ಬಿಜೆಪಿ ಶಾಸಕರ ಅಕ್ರಮದ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಕಾರ್ಯಕರ್ತರ ಮುಂದೆ ಭರವಸೆ ನೀಡಿದ್ದೇವೆ. ಈಗ ಆ ಪ್ರಕಾರ ನಡೆದುಕೊಳ್ಳಬೇಕಿದೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ತನಿಖೆ ನಡೆಸಿ ಎಂದು ಒತ್ತಾಯಿಸಿದ್ದಾರೆ.

ಬಾಗಿನಕ್ಕೆ ಆಹ್ವಾನ
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವಂತೆ ಬಾಗಲ ಕೋಟೆ ಜಿಲ್ಲೆಯ ಶಾಸಕರು ಹಾಗೂ ಉಸ್ತುವಾರಿ ಸಚಿವರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ಗೆ ಮನವಿ ಮಾಡಿದರು. ಆ. 20ರ ಬಳಿಕ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವುದು ಬಹುತೇಕ ಅಂತಿಮಗೊಂಡಿದೆ.

ಶಾಸಕರ ಆಗ್ರಹ ಏನು?
-ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ಬೇಕು
-ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಅಭಿಪ್ರಾಯಕ್ಕೆ ಬೆಲೆ ನೀಡಲಿ
-ಹಿಂದಿನ ಸರಕಾರದ ಅವಧಿಯ ಹಗರಣಗಳ ತನಿಖೆಯಾಗಲಿ
-ಸಚಿವರು ಜಿಲ್ಲೆಗೆ ಬಂದು ಸಭೆ ನಡೆಸಲಿ
-ಅಧಿಕಾರಿಗಳು ಶಾಸಕರ ಮಾತಿಗೆ ಗೌರವ ನೀಡಲಿ

ಸಿಎಂ ಭರವಸೆ ಏನು?
-8 ತಿಂಗಳುಗಳ ಬಳಿಕ ವಿಶೇಷ ಅನುದಾನಕ್ಕೆ ಕ್ರಮ
-ಸಚಿವರು ಜಿಲ್ಲೆಯಲ್ಲಿ ಸಭೆ ನಡೆಸಲಿದ್ದಾರೆ
-ವರ್ಗಾವಣೆ ವಿಚಾರದಲ್ಲಿ ಶಾಸಕರ ಮಾತಿಗೆ ಬೆಲೆ
-ಗ್ಯಾರಂಟಿ ಯೋಜನೆಯನ್ನು ಜನರಿಗೆ ತಲುಪಿಸಿ
-ಅರ್ಹ ಫ‌ಲಾನುಭವಿಗಳು ಯೋಜನೆ ವ್ಯಾಪ್ತಿಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಿ
-ಲೋಕಸಭಾ ಚುನಾವಣೆಗೆ ತಯಾರಿ ನಡೆಸಿ

ಒಂದು ವಾರ ಶಾಸಕರ ಜತೆಗೆ ಈ ಸಭೆ ಮುಂದುವರಿಯುತ್ತದೆ. ಶಾಸಕರ ಅಹವಾಲುಗಳನ್ನು ಆಲಿಸಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕೊಟ್ಟ ಭರವಸೆ ಪ್ರಕಾರ ಜಿಲ್ಲಾವಾರು ಶಾಸಕರ ಅಭಿಪ್ರಾಯ ಕೇಳುತ್ತಿದ್ದೇವೆ. ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಕಾರಣ ನಡೆಸುವುದಿಲ್ಲ. ಬಿಜೆಪಿ ಶಾಸಕರ ಜತೆಯೂ ಸಭೆ ನಡೆಸುತ್ತೇವೆ.
-ಡಿ.ಕೆ. ಶಿವಕುಮಾರ್‌, ಡಿಸಿಎಂ

ಇಂದಿನ ಸಭೆಯಲ್ಲಿ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಶಾಸಕರು ತಮ್ಮ ಅಹವಾಲುಗಳನ್ನು ಹೇಳಿಕೊಂಡಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.
-ಕೆ.ಎನ್‌. ರಾಜಣ್ಣ,
ಸಹಕಾರ ಸಚಿವ

ಟಾಪ್ ನ್ಯೂಸ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Raichur: ಕಾಂಗ್ರೆಸ್ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ: ಚಕ್ರವರ್ತಿ ಸೂಲಿಬೆಲೆ ಕಿಡಿ

Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿಕೆಶಿ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ… ಸಚಿವ ಎಚ್.ಕೆ.ಪಾಟೀಲ್ ಗರಂ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.