ಕೆಂಪಯ್ಯ, ಎಂ.ಎನ್.ರೆಡ್ಡಿ ವಿರುದ್ಧ ಸಿಎಂ ಗರಂ
Team Udayavani, Jul 17, 2017, 2:20 AM IST
ಬೆಂಗಳೂರು: ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಯ ನಂತರ ಮಂಗಳೂರಿನಲ್ಲಿ ಉಂಟಾದ ಕೋಮು ಸಂಘರ್ಷ ಸಂಬಂಧ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ವಿಫಲರಾದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಗೂ ಗುಪ್ತಚರ ವಿಭಾಗದ ಡಿಜಿ ಎಂ.ಎನ್.ರೆಡ್ಡಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಭಾನುವಾರ ಮೈಸೂರು ಪ್ರವಾಸ ಮುಗಿಸಿ ಬೆಂಗಳೂರಿಗೆ ಬಂದಿರುವ ಮುಖ್ಯಮಂತ್ರಿ
ಸಿದ್ದರಾಮಯ್ಯ, ತಮ್ಮ ಅಧಿಕೃತ ನಿವಾಸ ಕಾವೇರಿಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಗೂ ಗುಪ್ತಚರ ವಿಭಾಗದ ಪೊಲೀಸ್ ಮಹಾನಿರ್ದೇಶಕ ಎಂ.ಎನ್. ರೆಡ್ಡಿಯವರನ್ನು ಕರೆಸಿ, ಈ ಎರಡು ವಿಚಾರವಾಗಿ ಸ್ಪಷ್ಟನೆ ಕೇಳಿದ್ದಲ್ಲದೇ, ನಡೆದಿರುವ ಘಟನೆಯನ್ನು ಸಮರ್ಥವಾಗಿ ನಿಯಂತ್ರಿಸಲು ಆಗದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಇಂಥ ಸಂದರ್ಭದಲ್ಲಿ ಕೋಮು ಸಂಘರ್ಷ ನಡೆದರೆ, ಸರ್ಕಾರದ ಮೇಲೆ ಕೆಟ್ಟ ಹೆಸರು ಬರುತ್ತದೆ. ಅದಲ್ಲದೇ ಸಾರ್ವಜನಿಕವಾಗಿ ಒಳ್ಳೆಯ ಅಭಿಪ್ರಾಯ ಹುಟ್ಟುವುದಿಲ್ಲ. ಬಿ.ಸಿ.ರೋಡ್‌ನಲ್ಲಿ ನಡೆದ ಘಟನೆ ಮತ್ತು ಅದರ ನಂತರ ಮಂಗಳೂರು ವ್ಯಾಪ್ತಿಯಲ್ಲಿ ಆದಂತಹ ಕೋಮು ಸಂಘರ್ಷದ ಬಗ್ಗೆ ಮುಂಚಿತವಾಗಿಯೇ ಗುಪ್ತಚಾರ ಇಲಾಖೆಗೆ ಮಾಹಿತಿ ಸಿಕ್ಕಿಲ್ಲವೇ? ಹಾಗಾದರೆ ರಾಜ್ಯದಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು
ಎಂ.ಎನ್.ರೆಡ್ಡಿಯವರನ್ನು ಖಾರವಾಗಿಯೇ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಇನ್ನುಮುಂದೆ ಇಂಥ ಘಟನೆ ಮರುಕಳಿಸಬಾರದು. ಹದ್ದುಮೀರಿ ವರ್ತಿಸುವ ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಅಂಥ ಅಧಿಕಾರಿಗಳ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು
ಎಂಬುದನ್ನು ನಿರ್ಧರಿಸಿ, ಸರ್ಕಾರಕ್ಕೆ ತಿಳಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹಾಗೆಯೇ ಬೆಂಗಳೂರು ಕಾರಾಗೃಹದ ವಿಚಾರವಾಗಿ ಡಿಜಿಪಿ ಸತ್ಯನಾರಾಯಣ ರಾವ್ ಹಾಗೂ ಡಿಐಜಿ ರೂಪಾ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಕೆಂಡಾಮಂಡಲರಾಗಿದ್ದ ಸಿಎಂ, ಗೃಹ ಸಚಿವರ ಸಲಹೆಗಾರರು ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಇಲಾಖೆ ಅಧಿಕಾರಿಗಳ ವರ್ಗಾವಣೆಯಲ್ಲಿ ಆಸಕ್ತಿ ತೋರುವುದು ಮಾತ್ರವಲ್ಲ ಒಳ್ಳೆಯ ಕೆಲಸ ಮಾಡಿ ಎಂದು ಕಟುವಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಇಬ್ಬರು ಹಿರಿಯ ಅಧಿಕಾರಿಗಳು ಇಂಥ ತಪ್ಪುಗಳು ಆಗದಂತೆ ಎಚ್ಚರ ವಹಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು
JPC ಅಧ್ಯಕ್ಷ ಪಾಲ್ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್ ಒವೈಸಿ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.