ನೂತನ ಸಚಿವರ ಜತೆ ಸಭೆ ನಡೆಸಿದ ಸಿಎಂ
Team Udayavani, Feb 7, 2020, 3:05 AM IST
ಬೆಂಗಳೂರು: ಸಂಪುಟಕ್ಕೆ ಹೊಸದಾಗಿ ಸೇರಿದ ಹತ್ತು ಸಚಿವರಿಗೆ ಶನಿವಾರದ ಒಳಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪ್ರಮಾಣ ವಚನ ಸಮಾರಂಭ ಮುಗಿಯುತ್ತಲೇ ನೂತನ ಸಚಿವರ ಜತೆ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸಭೆ ನಡೆಸಿದ ಅವರು, ಸಂಪುಟ ವಿಸ್ತರಣೆ ಸಂಬಂಧ ಯಾವುದೇ ಅಸಮಾಧಾನ ಇಲ್ಲ.
ಉಮೇಶ್ ಕತ್ತಿ ಅವರ ಜತೆ ನಿನ್ನೆಯೇ ಮಾತನಾಡಿದ್ದೆ. ಅವರನ್ನು ಮಂತ್ರಿ ಮಾಡುವುದು ನೂರಕ್ಕೆ ನೂರು ಖಚಿತ ಎಂದರು. ಹೊಸ ಸಚಿವರ ಜತೆಗಿನ ಸಭೆಯಲ್ಲಿ ಬಿಜೆಪಿ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವಂತೆ ಕೆಲಸ ಮಾಡಿ. ನಿಮ್ಮ ಮೇಲೆ ಹೆಚ್ಚು ನಿರೀಕ್ಷೆ ಹಾಗೂ ಭರವಸೆ ಇದೆ ಎಂದು ಕಿವಿಮಾತು ಹೇಳಿದರು.
ನೂತನ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಮುಖ್ಯಮಂತ್ರಿಯವರು ಔಪಚಾರಿಕವಾಗಿ ಎಲ್ಲರನ್ನೂ ಕೊಠಡಿಗೆ ಕರೆದಿದ್ದರೂ ನಾವೆಲ್ಲರೂ ಬಂದು ಮಾತನಾಡಿದ್ದೇವೆ. ಖಾತೆಗಳ ಬಗ್ಗೆ ಯಾವುದೇ ತರಕಾರು ಇಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.