ಯರಗೋಳ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಸಿಎಂ ಸೂಚನೆ
Team Udayavani, Jun 24, 2020, 7:43 AM IST
ಬೆಂಗಳೂರು: ಎತ್ತಿನಹೊಳೆ, ಕೆ.ಸಿ.ವ್ಯಾಲಿ, ಯರಗೋಳ್ ಯೋಜನೆ ತ್ವರಿತವಾಗಿ ಅನು ಷ್ಟಾನಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಎತ್ತಿನಹೊಳೆ ಯೋಜನೆ ಸಂಬಂಧ ಭೂ ಸ್ವಾಧೀನ ಸಮಸ್ಯೆ, ಯರಗೋಳ್ ಯೋಜನೆಗೆ ಹಣಕಾಸು ಇಲಾಖೆ ಅನುಮತಿ, ಕೆ.ಸಿ.ವ್ಯಾಲಿ ಯೋಜನೆಯಡಿ 400 ಟಿಎಂಸಿ ಸಂಸ್ಕರಿತ ನೀರು ಪೂರೈಕೆಗೆ ಇರುವ ಅಡೆ ತಡೆ ನಿವಾರಿಸಬೇಕು. ಅಗತ್ಯ ಇರುವ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗದ ಜತೆ ಚರ್ಚಿಸಿದ ಅವರು, ಮೂರು ಯೋಜನೆಗಳ ಪ್ರಗತಿಯ ಮಾಹಿತಿ ಪಡೆದು ಆದಷ್ಟು ಶೀಘ್ರ ಯೋಜನೆಗಳ ಅನುಷ್ಟಾನಗೊಳಿಸುವ ಭರವಸೆ ನೀಡಿದರು. ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ವಿಧಾನಪರಿಷತ್ ಸದಸ್ಯ ನಸೀರ್ ಅಹಮದ್, ಎರಗೋಳ್ ಯೋಜನೆಗೆ ಹಣಕಾಸು ಇಲಾಖೆ ಅನುಮತಿ ಬೇಕಾಗಿದ್ದು ಅದರ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ದೊರೆತಿದೆ. ಕೆ.ಸಿ.ವ್ಯಾಲಿ ಯೋಜನೆಯಡಿ ಬೆಂಗಳೂರಿನಿಂದ 400 ದಶಲಕ್ಷ ಲೀಟರ್ ಸಂಸ್ಕರಿಸಿದ ನೀರು ಕೆರೆಗಳಿಗೆ ಹರಿಸಲು ಯೋಜನೆಯಡಿ ತಿಳಿಸಲಾಗಿತ್ತು.
ಆದರೆ, 284 ದಶಲಕ್ಷ ಲೀಟರ್ ಮಾತ್ರ ಹರಿಸಲಾಗುತ್ತಿದ್ದು ಉಳಿದ 116 ದಶಲಕ್ಷ ಲೀಟರ್ ಸೆಪ್ಟೆಂಬರ್ ವೇಳೆಗೆ ಹರಿಸಲು ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ. ಟಿಎಸ್‌ಪಿಗಳ ಸಾಮರ್ಥಯ ಹೆಚ್ಚಿಸಲು ಜಲಮಂಡಳಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು. ಎತ್ತಿನಹೊಳೆ ಯೋಜನೆ ಸಂಬಂಧ ವೆಚ್ಚ ದುಪ್ಪಟ್ಟಾಗಿದ್ದು ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರ ಭಾಗದಲ್ಲಿ ಭೂ ಸ್ವಾಧೀನ ಸಮಸ್ಯೆ ಎದುರಾಗಿದೆ. ಹೀಗಾಗಿ ಅದನ್ನು ನಿವಾರಿಸಿ ಯೋಜನೆಗಿರುವ ಅಡೆತಡೆ ನಿವಾರಿಸಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ತಿಳಿಸಿದ್ದಾರೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.