ಯುವಿಸಿಇ ಗೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸುವಂತೆ ಸಿಎಂ ಸೂಚನೆ
Team Udayavani, Aug 22, 2022, 9:42 PM IST
ಬೆಂಗಳೂರು: ಬೆಂಗಳೂರಿನ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು ಯುವಿಸಿಇ ಅಧ್ಯಕ್ಷ ಬಿ.ಮುತ್ತುರಾಮನ್ ಅವರೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು.
ಕಾಲಮಿತಿಯೊಳಗೆ ಜಾರಿಮಾಡಬಹುದಾದ ಉತ್ತಮ ವಿಚಾರಗಳನ್ನು ಹೊಂದಿದ ಅಲ್ಪಾವಧಿ ಮತ್ತು ದೀರ್ಘಾವಧಿ ಗುರಿಗಳನ್ನು ರೂಪಿಸಬೇಕು. ಸಾಧ್ಯವಿರುವೆಡೆಗಳಲ್ಲಿ ಅತ್ಯುತ್ತಮ ಸಂಸ್ಥೆಗಳೊಂದಿಗೆ ಸಹಯೋಗ ಏರ್ಪಡಿಸಿ ಯಶಸ್ವಿಗೊಳಿಸುವುದು ಬಹಳ ಮುಖ್ಯ. ಯುವಿಸಿಇ ಯಶಸ್ಸು ಇತರರಿಗೆ ಸ್ಪೂರ್ತಿಯಾಗಬೇಕೆಂದು ತಿಳಿಸಿದರು.
ಕೆಐಟಿಗೆ ಆಯ್ಕೆಯಾಗಿರುವ ಪ್ರತಿ ಸಂಸ್ಥೆಗೂ ಸಮಿತಿ
ಕೆಐಟಿಗೆ ಆಯ್ಕೆಯಾಗಿರುವ ಪ್ರತಿ ಸಂಸ್ಥೆಗೂ ನಿರ್ದಿಷ್ಟ ಗುರಿಗಳುಳ್ಳ ಸಮಿತಿಯನ್ನು ರಚಿಸಬೇಕು. ಮೌಲ್ಯ ಹಾಗೂ ನೈತಿಕತೆಯ ಆಧಾರದ ಮೇಲೆ ಸಂಸ್ಥೆಗಳನ್ನು ಕಟ್ಟಬೇಕು. ಆಯಾ ಪ್ರದೇಶದಲ್ಲಿ ಈ ಸಂಸ್ಥೆಗಳು ದೂರಗಾಮಿ ಪರಿಣಾಮವನ್ನು ಉಂಟು ಮಾಡಬೇಕೆಂದು ತಿಳಿಸಿದರು.
ಬೆಂಗಳೂರಿನಲ್ಲಿ ಯೂನಿಕಾರ್ನ್ ಚಿಹ್ನೆ
ಬೆಂಗಳೂರು ದೇಶದಲ್ಲಿಯೇ ಅತಿ ಹೆಚ್ಚು ಸ್ಟಾರ್ಟ್‍ಅಪ್ ಮತ್ತು ಯೂನಿಕಾರ್ನ್‍ಗಳನ್ನು ಹೊಂದಿರುವ ನಗರವಾಗಿದ್ದು, ಅದನ್ನು ಪ್ರತಿಬಿಂಬಿಸಲು ಹಾಗೂ ಉತ್ತೇಜಿಸಲು ನಗರದ ಪ್ರಮುಖ ಸ್ಥಳ ಗುರುತಿಸಿ ಯೂನಿಕಾರ್ನ್ ಚಿಹ್ನೆಯನ್ನು ಸ್ಥಾಪಿಸಲು ಸೂಚಿಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.