ಸಿಎಂ ಕುಮಾರಸ್ವಾಮಿಯೇ ಎ 1 ಆರೋಪಿ: ಶೆಟ್ಟರ್
Team Udayavani, Feb 13, 2019, 1:24 AM IST
ವಿಧಾನಸಭೆ: ಆಪರೇಷನ್ ಆಡಿಯೋ ಪ್ರಕರಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯೇ ಎ1 ಆರೋಪಿಯಾಗಿದ್ದಾರೆ. ಸಭಾಧ್ಯಕ್ಷರ ವಿರುದಟಛಿ ಆರೋಪ ಕೇಳಿ ಬಂದರೂ, ಅವರ ಗಮನಕ್ಕೆ ತಾರದೇ ನೇರವಾಗಿ ಮಾಧ್ಯಮಗಳಿಗೆ ಬಹಿರಂಗಗೊಳಿಸಿ, ಸಭಾಧ್ಯಕ್ಷರನ್ನು ಬೀದಿಗೆ ತಂದಿದ್ದಾರೆ ಎಂದು ಮಾಜಿ ಸಿಎಂಜಗದೀಶ ಶೆಟ್ಟರ್ ಆರೋಪಿಸಿದರು.
ಆಡಿಯೋ ಪ್ರಕರಣವನ್ನು ಯಾವ ತನಿಖೆಗೆ ಒಪ್ಪಿಸಬೇಕು ಎನ್ನುವ ಕುರಿತು ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಆಡಿಯೋ ಟೇಪ್‌ನಲ್ಲಿ ಸ್ಪೀಕರ್ ಬಗ್ಗೆ ಪ್ರಸ್ತಾಪವಾಗಿದೆ ಎಂದು ಗೊತ್ತಿದ್ದರೂ, ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿ ಅಪರಾಧ ಮಾಡಿದ್ದಾರೆ ಎಂದು ದೂರಿದರು. ಮಾತು ಮುಂದುವರಿಸಿದ ಶೆಟ್ಟರ್, ಕುಮಾರಸ್ವಾಮಿಯವರೇ ಆಡಿಯೋ ಬಹಿರಂಗಪಡಿಸಿದ್ದಾರೆ.
ಯಡಿಯೂರಪ್ಪ ಅವರ ಬಳಿ ಕಳುಹಿಸಿದ್ದು ನಾನೇ ಎಂದು ಹೇಳಿದ್ದಾರೆ. ಹೀಗಾಗಿ, ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲ ಪ್ರಹಸನ ಸೃಷ್ಟಿಸಿದ್ದಾರೆ ಎಂದು ದೂರಿದರು. ಈ ವೇಳೆ ಮಧ್ಯಪ್ರವೇಶಿಸಿದ ಕುಮಾರಸ್ವಾಮಿ, ನೀವು ಸನ್ಯಾಸಿ ಅಲ್ಲ ಎಂದು ಹೇಳಿದ್ದೀರಿ, ನಾನೂ ಸನ್ಯಾಸಿಯಲ್ಲ. ರಾಜಕೀಯ ಲಾಭಕ್ಕಾಗಿಯೇ ಮಾಡಿದ್ದೇನೆ. ಬಿಜೆಪಿಯವರು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಹೇಳುತ್ತಿದ್ದರು. ಅದನ್ನು ರಾಜ್ಯದ ಜನತೆಗೆ ತೋರಿಸಲು ಈ ರೀತಿ ಮಾಡಿದ್ದೇನೆಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.