ನೀರಿನ ಸಮಸ್ಯೆ ತಲೆದೋರದಂತೆ ಕ್ರಮಕ್ಕೆ ಸಿಎಂ ಸೂಚನೆ
Team Udayavani, Jun 6, 2020, 7:28 AM IST
ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಸಮಸ್ಯೆ ತಲೆದೋರುವ ನಿರೀಕ್ಷೆಯಿದ್ದು, ಯಾವುದೇ ಕಾರಣಕ್ಕೂ ಜನ ನೀರಿಗೆ ಪರದಾಡದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ನಡೆದ ನಗರಾಭಿವೃದ್ದಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇನ್ನೆರಡು ತಿಂಗಳಲ್ಲಿ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.
ಆಗ ಮುಖ್ಯಮಂತ್ರಿಗಳು, ಇದನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೇಂದ್ರ ಸರ್ಕಾರದ ನೆರವಿನ “ಅಮೃತ್’ ಯೋಜನೆಯಡಿ ಕೇಂದ್ರದ ಪಾಲಿನ ಬಾಕಿ ಅನುದಾನ ಪಡೆಯಲು ರಾಜ್ಯದ ಪಾಲಿನ ಮೊತ್ತವಾದ 209 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು.
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಬರುವ ಅನುದಾನಕ್ಕೆ ಯಾವುದೇ ತೊಡಕಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ನಿವೃತ್ತಿ, ಮರಣ ಅಥವಾ ಇತರೆ ಕಾರಣಗಳಿಂದ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಸ್ತಾಪ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿದ್ದ ಇಲಾಖೆ ಅಧಿಕಾರಿಗಳು, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಜಿಲ್ಲಾಧಿಕಾರಿಗಳ ಬಳಿ 47.24 ಕೋಟಿ ರೂ. ಅನುದಾನದ ಲಭ್ಯತೆ ಇದೆ.
ಏಪ್ರಿಲ್ ಅಂತ್ಯದವರೆಗೆ 12 ನಗರಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಕೋವಿಡ್- 19 ವೈರಸ್ ನಿಯಂತ್ರಣ, ನಿರ್ವಹಣೆಗೆ ಸಂಬಂಧಪಟ್ಟಂತೆ ನಗರ ಸ್ಥಳೀಯ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿವೆ ಎಂದು ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಸಚಿವರಾದ ಬಿ.ಎ.ಬಸವರಾಜು, ಕೆ.ಸಿ.ನಾರಾಯಣಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ನಗರಾಭಿವೃದಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿರಾಕೇಶ್ ಸಿಂಗ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.