ವಹಿವಾಟು ಅಭಿವೃದ್ಧಿ ಯೋಜನೆ ರೂಪಿಸಲು ಸಿಎಂ ಸೂಚನೆ
Team Udayavani, Aug 25, 2021, 6:20 AM IST
ಬೆಂಗಳೂರು: ಕರ್ನಾಟಕ ಕೈಮಗ್ಗ ನಿಗಮದ ಪುನಶ್ಚೇತನಕ್ಕೆ ಕೂಡಲೇ ವಹಿವಾಟು ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಹಣಕಾಸಿನ ಪರಿಸ್ಥಿತಿ ಸುಧಾರಣೆ ಕುರಿತ ಸಭೆಯಲ್ಲಿ ಈ ಸೂಚನೆ ನೀಡಿದರು. ಶಿಕ್ಷಣ ಇಲಾಖೆಯ ಸಮವಸ್ತ್ರ ಪೂರೈಕೆಯಲ್ಲಿ ನಿಗಮಕ್ಕೆ ಆಗಿರುವ 10 ಕೋಟಿ ರೂ. ನಷ್ಟದಲ್ಲಿ 5 ಕೋಟಿ ಸರಕಾರ ಭರಿಸಲಿದ್ದು, ಉಳಿದ 5 ಕೋಟಿ ರೂ. ಗಳನ್ನು ನಿಗಮದ ವಹಿವಾಟಿನ ಮೂಲಕ ಭರಿಸುವಂತೆ ಸೂಚನೆ ನೀಡಿದರು.
ಜಲಜೀವನ್ ಮಿಷನ್:
ಪ್ರತಿ ತಿಂಗಳು ಪರಿಶೀಲನೆ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಚುರುಕು ಗೊಳಿಸುವ ಉದ್ದೇಶದಿಂದ ಕೈಗೆತ್ತಿಕೊಂಡ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೇಲ್ವಿಚಾ ರಣೆಗೆ ಸಮಿತಿ ರಚಿಸಲು ಸೂಚನೆ ನೀಡಿರುವ ಬೊಮ್ಮಾಯಿ ಅವರು ಈ ಯೋಜನೆಯ ಪ್ರಗತಿ ಬಗ್ಗೆ ಪ್ರತಿ ತಿಂಗಳು ತಾವು ಖುದ್ದು ಪರಿಶೀಲನೆ ನಡೆಸುವುದಾಗಿ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.