ಕೃಷಿ ಹೊಂಡ ಅವ್ಯವಹಾರದ ಬಗ್ಗೆ ತನಿಖೆಗೆ ಸಿಎಂ ಆದೇಶ
Team Udayavani, Sep 9, 2019, 3:00 AM IST
ಬೆಂಗಳೂರು: “ಕೃಷಿ ಭಾಗ್ಯ’ ಯೋಜನೆಯಲ್ಲಿ ಅಕ್ರಮ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ತನಿಖೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಈ ಕುರಿತು ಸೂಚನೆ ನೀಡಿರುವ ಅವರು, 2014-15 ರ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. 2014-15 ರಿಂದ 2017-18 ರವರೆಗೆ ರಾಜ್ಯದ 131 ತಾಲೂಕುಗಳಲ್ಲಿ 2,15,130 ಕೃಷಿ ಹೊಂಡ ನಿರ್ಮಿಸಲಾಗಿದೆ. ಇದಕ್ಕಾಗಿ 921.16 ಕೋಟಿ ರೂ.ವೆಚ್ಚ ಮಾಡಲಾಗಿದೆ.
ಮೇಲ್ನೋಟಕ್ಕೆ ಇದರ ಮಾಹಿತಿ ಸರಿ ಇಲ್ಲ. ಅಷ್ಟು ಪ್ರಮಾಣದ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿಲ್ಲ ಎಂಬ ದೂರು ಗಳು ಇವೆ. ಹೀಗಾಗಿ, ಈ ಬಗ್ಗೆ ತನಿಖೆ ನಡೆಸಿ, ಎರಡು ತಿಂಗಳಲ್ಲಿ ವರದಿ ನೀಡುವಂತೆ ತಿಳಿಸಿದ್ದಾರೆ. 2,15,130 ಕೃಷಿ ಹೊಂಡಗಳು ಮತ್ತು ಅವುಗಳಿಗೆ ಪೂರಕವಾಗಿ ಪೂರೈಸಲಾಗಿ ರುವ ಪಾಲಿಥೀನ್ ಹೊದಿಕೆ, ನೆರಳು ಪರದೆ, ಡೀಸೆಲ್ ಪಂಪ್‌ಗ್ಳ ಅಳವಡಿಕೆ ಕುರಿತು ಖುದ್ದು ತಪಾಸಣೆ/ಪರಿಶೀಲನಾ ವರದಿಗಳನ್ನು ಎಲ್ಲ ಜಿಲ್ಲೆಗಳ ಕೃಷಿ ನಿರ್ದೇಶಕರಿಂದ ಪಡೆದು, ಸಮಗ್ರ ತನಿಖೆ ನಡೆಸಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.