![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 29, 2023, 8:41 PM IST
ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಸಿಎಂ ಅವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನ ದಿನದಿಂದಲೂ ಬಸವರಾಜ ರಾಯರಡ್ಡಿ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ನಾನಾ ಕಾರಣಗಳಿಂದ ಅವರಿಗೆ ಮಂತ್ರಿಗಿರಿ ಲಭಿಸಿರಲಿಲ್ಲ. ಆದರೂ ಸುಮ್ಮನಿದ್ದ ಅವರು ಸರಕಾರಕ್ಕೆ ಪತ್ರ ಚಳವಳಿ ನಡೆಸಿ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದರು. ಕೊನೆಗೂ ಸರಕಾರವು ಅವರ ಅಸಮಾಧಾನ ತಣಿಸುವ ಪ್ರಯತ್ನ ಮಾಡಿ ಯಶ ಕಂಡಿದೆ. ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಿದೆ.
You seem to have an Ad Blocker on.
To continue reading, please turn it off or whitelist Udayavani.