Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
ಪೊಲೀಸರಿಂದ ಬಿಗಿ ಬಂದೋಬಸ್ತ್... ಹಲವರು ವಶಕ್ಕೆ
Team Udayavani, Nov 6, 2024, 10:35 AM IST
ಮೈಸೂರು: ಮುಡಾದಿಂದ ತಮ್ಮ ಪತ್ನಿ ಕೋಟ್ಯಂತರ ರೂ. ಮೌಲ್ಯದ ನಿವೇಶನ ಪಡೆಯಲು ಪ್ರಭಾವ ಬೀರಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಬುಧವಾರ(ನ6)ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.
ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು ರಸ್ತೆ ಮಾರ್ಗವಾಗಿ ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರು 10 ಗಂಟೆಗೆ ಸರಿಯಾಗಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸುತ್ತಿದ್ದು, 72 ಪ್ರಶ್ನೆಗಳನ್ನು ಸಿಎಂ ಮುಂದಿಡಲಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ಅವರು ತನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಪ್ರಕರಣವೊಂದರ ತನಿಖೆಯಲ್ಲಿ ಇದೆ ಮೊದಲ ಬಾರಿಗೆ ವಿಚಾರಣೆ ಎದುರಿಸಿದ್ದಾರೆ.
ಬಿಜೆಪಿ ಪ್ರತಿಭಟನೆ
ಮೈಸೂರಿನ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಾಯುಕ್ತ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಕಚೇರಿ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಲೋಕಾಯುಕ್ತ ವಿಚಾರಣೆ ಮುಗಿದ ಬಳಿಕ ಚನ್ನಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.