CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ
ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪದಾಧಿಕಾರಿಗಳ ನಿಯೋಗಕ್ಕೆ ಭರವಸೆ
Team Udayavani, Oct 25, 2024, 12:59 AM IST
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ’ಯನ್ನು (ಜಾತಿ ಗಣತಿ ವರದಿ) ಸಚಿವ ಸಂಪುಟದಲ್ಲಿಟ್ಟು ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳ ನಿಯೋಗಕ್ಕೆ ಭರವಸೆ ನೀಡಿದರು.
ಮಹಾಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ ನೇತೃತ್ವದ ನಿಯೋಗ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ಮನವಿ ಪತ್ರ ಸ್ವೀಕರಿಸಿದ ನಂತರ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈಗ ರಾಜ್ಯದಲ್ಲಿ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಮುಗಿದ ಬಳಿಕ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ”ಯನ್ನು ಸಚಿವ ಸಂಪುಟದಲ್ಲಿಟ್ಟು ಚರ್ಚಿ ಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ ಎಂದು ನಿಯೋಗದ ಮುಖಂಡರು ತಿಳಿಸಿದ್ದಾರೆ.
ಹಲವು ಬೇಡಿಕೆಗಳ ಈಡೇರಿಕೆಗೆ ಮನವಿ: ಇದೇ ವೇಳೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳ ನಿಯೋಗವು, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಒಟ್ಟು ಮೀಸಲಾತಿಯ ಪ್ರಮಾಣವನ್ನು ಶೇ.75ಕ್ಕೆ ವಿಸ್ತರಿಸಬೇಕು. ಎಸ್‌ಸಿ, ಎಸ್‌ಟಿ. ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಬೇಕು. ರಾಜ್ಯದಲ್ಲಿ ಖಾಸಗಿ ರಂಗದಲ್ಲಿ ಮೀಸಲಾತಿ ಜಾರಿಗೆ ತರಲು ಕಾನೂನು ರೂಪಿಸಬೇಕು. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿಧಾನಸಭೆ, ಲೋಕಸಭೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಬೇಕು. ವಿಧಾನ ಪರಿಷತ್ ಮತ್ತು ರಾಜ್ಯಸಭೆಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಬೇಕು. ಈ ಕುರಿತು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಸಿಎಂಗೆ ಆಗ್ರಹಿಸಿತು.
ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್, ಬಿ.ಟಿ.ಲಲಿತಾ ನಾಯ್ಕ, ಅನಂತ ನಾಯಕ,ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಎಂ.ಈರಣ್ಣ, ರವಿ ಮಾಕಳಿ, ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.