Karnataka: ತೆರಿಗೆ ಸಂಗ್ರಹ ಗುರಿ ನೀಡಿದ ಸಿಎಂ ಸಿದ್ದರಾಮಯ್ಯ
ಸಂಪನ್ಮೂಲ ಸಂಗ್ರಹ ಇಲಾಖೆಗಳ ಪರಾಮಶೆì ಮಾಡಿದ ಸಿಎಂ
Team Udayavani, Dec 4, 2024, 6:55 AM IST
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು ನವೆಂಬರ್ ಅಂತ್ಯದವರೆಗೆ ನೀಡಿದ್ದ ತೆರಿಗೆ ಸಂಗ್ರಹದ ಗುರಿ (56,317 ಕೋಟಿ ರೂ.) ಸಾಧಿಸು ವಲ್ಲಿ ಹಿಂದೆ ಬಿದ್ದಿದ್ದು, ಇದುವರೆಗಿನ ಸಂಗ್ರಹ 53,103 ಕೋಟಿ ರೂ.ವನ್ನು ಸಂಗ್ರಹಿಸಲು ಮಾತ್ರವೇ ಶಕ್ತವಾಗಿದೆ. ಆದರೆ ಸರಕಾರಕ್ಕೆ ಆದಾಯ ತಂದುಕೊಡುವ ಉಳಿದ ಇಲಾಖೆ ಗಳು ನಿರೀಕ್ಷಿತ ಗುರಿ ತಲುಪಿವೆ.
ವಾಣಿಜ್ಯ ತೆರಿಗೆ, ಅಬಕಾರಿ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಕಾರದ ಎಲ್ಲ ಸಂಪನ್ಮೂಲ ಸಂಗ್ರಹ ಇಲಾಖೆಗಳು ಹಣಕಾಸು ವರ್ಷದ ಅಂತ್ಯಕ್ಕೆ ಕಡ್ಡಾಯವಾಗಿ ತಮ್ಮ ಗುರಿ ತಲುಪಬೇಕು ಎಂದು ಸೂಚನೆ ನೀಡಿದ್ದಾರೆ.
ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಸಂಪನ್ಮೂಲ ಸಂಗ್ರಹ ಇಲಾಖೆಗಳು ಇದುವರೆಗೆ ಉತ್ತಮ ಸಾಧನೆ ಮಾಡಿವೆ. ವಾಣಿಜ್ಯ ತೆರಿಗೆ ಇಲಾಖೆಯು ಶೇ. 100 ಬಜೆಟ್ ಗುರಿ ತಲುಪಲು ಅಗತ್ಯ ಕ್ರಮ ಕೈಗೊಳ್ಳಬೇಕು, ಅಬಕಾರಿ ಇಲಾಖೆಯ ಜಾಗೃತ ದಳ ಇನ್ನಷ್ಟು ಚುರುಕಾಗಬೇಕು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾನೂನು ಬಾಹಿರ ನೋಂದಣಿಗೆ ಕಡಿವಾಣ ಹಾಕಬೇಕು, ಅರಣ್ಯ ಮತ್ತು ಗಣಿ ಇಲಾಖೆಯ ಮಧ್ಯೆ ಸಮನ್ವಯತೆ ಮೂಡಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ವಾಣಿಜ್ಯ ಇಲಾಖೆ ಶೇ. 94 ಸಾಧನೆ
ವಾಣಿಜ್ಯ ಇಲಾಖೆಗೆ ನವೆಂಬರ್ ಅಂತ್ಯದವರೆಗೆ ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ. ನೀಡಲಾಗಿತ್ತು. ಇದುವರೆಗೆ 53,103 ಕೋಟಿ ರೂ ತೆರಿಗೆ ಸಂಗ್ರಹಿಸಿ ಶೇ. 94ರಷ್ಟು ಸಾಧನೆ ಮಾಡಿದೆ. ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದ್ದು ಎಲ್ಲ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕು ಎಂದು ಸಿಎಂ ಹೇಳಿದ್ದಾರೆ.
ಇದರ ಜತೆಗೆ ಜಿಎಸ್ಟಿ ಸಂಗ್ರಹವನ್ನು ಹೆಚ್ಚಿಸಬೇಕು. ಲೆಕ್ಕಪರಿಶೋಧನೆ ಮತ್ತು ನ್ಯಾಯನಿರ್ಣಯದಿಂದ ಪ್ರಸ್ತುತ ಹಣಕಾಸು ಸಾಲಿನಲ್ಲಿ 4671 ಕೋಟಿ ರೂ. ತೆರಿಗೆ ಸಂಗ್ರಹ ಗುರಿಯಿದ್ದು, ನವೆಂಬರ್ ಅಂತ್ಯದವರೆಗೆ 3,076.86 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. ಆದ್ದರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ರಾಜ್ಯ ಜಿಎಸ್ಟಿ ಸಂಗ್ರಹದಲ್ಲಿ ಶೇ. 15ರ ಬೆಳವಣಿಗೆ ದರ ಸಾಧಿಸಿದೆ. ನವೆಂಬರ್ ಅಂತ್ಯದವರೆಗೆ13,722 ಕೋಟಿ ರೂ. ಜಿಎಸ್ಟಿ ಸಂಗ್ರಹಿಸ ಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಜಾಗೃತ ದಳವನ್ನು ಚುರುಕುಗೊಳಿಸಿ
ಅಬಕಾರಿ ಇಲಾಖೆಗೆ ಈ ಹಣಕಾಸು ವರ್ಷದಲ್ಲಿ 38,525 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ ಗುರಿ ನಿಗದಿ ಪಡಿಸಲಾಗಿದ್ದು, ನವೆಂಬರ್ ಅಂತ್ಯದವರೆಗೆ ರೂ.23,600 ಕೋಟಿ ರೂ. ಸಂಗ್ರಹಿಸಲಾಗಿದ್ದು, ಶೇ. 61.26 ಗುರಿ ಸಾಧಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ರೂ.1432.23 ಕೋಟಿ ರಾಜಸ್ವ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, ಶೇ. 6.46 ಬೆಳವಣಿಗೆ ದರ ಸಾಧಿಸಲಾಗಿದೆ. ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳ ಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಾನೂನು ಬಾಹಿರ ನೋಂದಣಿಗೆ ಕಡಿವಾಣ ಹಾಕಿ
ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಬೇಕು. ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು. ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ
Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ
ಜೀವನ ಅತ್ಯಮೂಲ್ಯ, ಮಾದಕ ವ್ಯಸನ ಒಳ್ಳೆಯದಲ್ಲ: ವಿದ್ಯಾರ್ಥಿಗಳಿಗೆ ನಟ ಉಪೇಂದ್ರ ಕಿವಿಮಾತು
Belagavi: ಜೀವ ವಿಮಾ ಪಾಲಿಸಿಯ ಹಣಕ್ಕಾಗಿ ಸಹೋದರನನ್ನೇ ಕೊ*ಲೆ ಮಾಡಿದ ತಮ್ಮ
ಪ್ರವಾಸಿಗರೇ ಗಮನಿಸಿ.. ಈ ನಾಲ್ಕು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Mugila Mallige: ನವತಂಡದ ಮುಡಿಗೆ ಮುಗಿಲ ಮಲ್ಲಿಗೆ
Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ
CM, DCM, ಗೃಹಸಚಿವರ ವಿರೋಧ ಪೋಸ್ಟ್ ;10 ಜಿಲ್ಲೆಯ 15 ಠಾಣೆಗಳಲ್ಲಿ ಪ್ರಕರಣ ದಾಖಲು
Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್
Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.