Siddaramaiah; ತೆರಿಗೆ ವಂಚನೆ-ತೆರಿಗೆ ಸೋರಿಕೆ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ
Team Udayavani, Sep 14, 2023, 2:21 PM IST
ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ ಎಂದು ಮೆಚ್ವುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳದೆ ತೆರಿಗೆ ವಂಚಿಕೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದರು.
ಬೆಳವಣಿಗೆ ದರವು ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು. ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.15 ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ. 9.4 ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಶೇ. 24ರ ಬೆಳವಣಿಗೆ ಗುರಿಯನ್ನು ನೀಡಲಾಗಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಈ ಗುರಿ ದಾಟಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಲ್ಲದೆ ತೆರಿಗೆ ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ತೆರಿಗೆ ಸೋರಿಕೆ ತಡೆಗಟ್ಟಲು ನಿರ್ದೇಶನ ನೀಡಿದರು.
ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಹಿಂದೆ ಉಳಿದವರು ಎಲ್ಲ ಪ್ರಯತ್ನ ಮಾಡಬೇಕು. ಜಾಗೃತ ದಳದವರು ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಿ ಎಂದರು.
ಇದನ್ನೂ ಓದಿ:Cash On Delivery ವೇಳೆ ಈ…ದಿನಾಂಕದಿಂದ 2000 ಮುಖಬೆಲೆಯ ನೋಟನ್ನು ಸ್ವೀಕರಿಸಲ್ಲ: ಅಮೆಜಾನ್
ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್ ಹಾಗೂ ಡಾ. ಎಂ.ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.