ರಸ್ತೆ ಗುಂಡಿ ಮುಚ್ಚಲಾಗದ ಸಿಎಂ ಸಿದ್ದರಾಮಯ್ಯ ನಪುಂಸಕ!
Team Udayavani, Oct 11, 2017, 3:33 PM IST
ಬೆಂಗಳೂರು: ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಬಿಜೆಪಿ ನಗರ ಘಟಕ ಬುಧವಾರ ಬೆಳಗ್ಗೆ ಬಿಬಿಎಂಪಿ ಎದುರು ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಬಿಬಿಎಂಪಿ ವಿಪಕ್ಷ ನಾಯಕ ಪದ್ಮಭಾಭ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ನಪುಂಸಕ’ ಎಂದು ಲೇವಡಿ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಗರದ ಬಿಜೆಪಿಯ ಶಾಸಕರು, ಬಿಬಿಎಂಪಿ ಸದಸ್ಯರು ಮತ್ತು ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಪ್ರತಿಭಟನಾ ಕಾರರು ಸಿಎಂ ಸಿದ್ದರಾಮಯ್ಯ, ಸಚಿವ ಜಾರ್ಜ್ ಮತ್ತು ಬಿಬಿಎಂಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
‘ನಪುಂಸಕ ಎನ್ನುವ ಪದ ಆಕ್ಷೇಪಾರ್ಹ ಪದವಲ್ಲ. ಸಿದ್ದರಾಮಯ್ಯ ಕೆಲಸಕ್ಕೆ ಬಾರದ ವ್ಯಕ್ತಿ’ ಎಂದು ಈ ಹೇಳಿಕೆ ನೀಡಿರುವುದಾಗಿ ರೆಡ್ಡಿ ಸುದ್ದಿಗಾರರಿಗೆ ಹೇಳಿದರು.
ಪ್ರತಿಭಟನೆ ವೇಳೆ ಕಾರ್ಪೋರೇಷನ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವರಾರು ಪರದಾಡಬೇಕಾಯಿತು.
15 ದಿನಗಳ ಒಳಗೆ ಗುಂಡಿ ಮುಚ್ಚುತ್ತೇವೆ
ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ’15 ದಿನಗಳ ಒಳಗೆ ಎಲ್ಲಾ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ. 3 ತಿಂಗಳ ಒಳಗೆ ರಸ್ತೆಗಳನ್ನು ಸಂಪೂರ್ಣವಾಗಿ ದುರಸ್ತಿ ಮಾಡುತ್ತೇವೆ. ರಸ್ತೆಗಳನ್ನು ಹೇಗೆ ಮಾಡುತ್ತೇವೆ ನೋಡಿ’ ಎಂದರು.
ಇದೇ ವೇಳೆ ‘ಎಲ್ಲಾ ಅಪಘಾತಗಳು ಗುಂಡಿಗಳಿಂಗಾಗಿ ಆಗಿವೆ ಎನ್ನುವುದು ಸರಿಯಲ್ಲ’ ಎಂದರು.
ಗುಂಡಿಗೆ ಇನ್ನೊಂದು ಬಲಿ
ಉತ್ತರಹಳ್ಳಿ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ಬಿದ್ದಿದ್ದ 20 ವರ್ಷ ಪ್ರಾಯದ ಬೈಕ್ ಸವಾರ ತೇಜಸ್ವಿ ಗೌಡ ಮೇಲೆ ಲಾರಿ ಹರಿದು ದಾರುಣವಾಗಿ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.