Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಅನರ್ಹ ಕಾರ್ಡ್ ಮರಳಿಸಲು ಕಾಲಾವಕಾಶ ನೀಡಿ ಬಳಿಕ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಆದೇಶ
Team Udayavani, Jan 9, 2025, 11:59 PM IST
ಬೆಂಗಳೂರು: ಸ್ವತಃ ತಾವೇ ತಾತ್ಕಾಲಿಕ ತಡೆಯೊಡ್ಡಿದ್ದ ಅನರ್ಹ ಬಿಪಿಎಲ್ ಕಾರ್ಡ್‌ಗಳಿಗೆ ಕತ್ತರಿ ಹಾಕುವ ಪ್ರಕ್ರಿಯೆಗೆ ಮರುಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಒಟ್ಟಾರೆ 1.53 ಕೋಟಿ ವಿವಿಧ ಪ್ರಕಾರದ ಪಡಿತರಚೀಟಿಗಳಿದ್ದು, 5.30 ಕೋಟಿ ಸದಸ್ಯ ಫಲಾನುಭವಿಗಳಿ¨ªಾರೆ. ಇದರಲ್ಲಿ ಆದ್ಯತಾ ಪಡಿತರ ಚೀಟಿ (ಬಿಪಿಎಲ್ ಕಾರ್ಡ್)ದಾರರು ಬಹುಪಾಲು ಅಂದರೆ 1.27 ಕೋಟಿ ಇದ್ದಾರೆ. ಆದರೆ ಕೇಂದ್ರ ಸರಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದೆ ಬಿಪಿಎಲ್ ಪಡಿತರಚೀಟಿ ಹೊಂದಿದ್ದಾರೆ. ಅಂತಹವರನ್ನು ಗುರುತಿಸಿ ತೆಗೆದು ಹಾಕಬೇಕು ಎಂದು ಖಡಕ್ ಸೂಚನೆ ನೀಡಿದರು.
ಅರ್ಹರದ್ದು ರದ್ದು ಮಾಡದಿರಿ
ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ತಮ್ಮ ಕಾರ್ಡ್ ಗಳನ್ನು ಹಿಂದಿರುಗಿಸಲು ಕಾಲಾವಕಾಶ ನೀಡಬೇಕು. ಬಳಿಕ ಅಂಥವರಿಗೆ ನೋಟಿಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ ಸಿಎಂ, ಈ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಬಾರದು ಎಂದೂ ಸ್ಪಷ್ಟವಾಗಿ ಹೇಳಿದರು.
ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4,692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3,253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4.44 ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯುತ್ತಿ¨ªಾರೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.
ಪೆಟ್ರೋಲ್ ಬಂಕ್ ತಪಾಸಣೆ ಹೆಚ್ಚಿಸಿ
ರಾಜ್ಯದಲ್ಲಿ 4,518 ಪೆಟ್ರೋಲ್ ಬಂಕ್‌ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದರು.
ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.