ಕಾಂಗ್ರೆಸ್ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯನಲ್ಲವೇ? ಸಿಎಂ ಹೇಳಿದ್ದೇನು?
Team Udayavani, May 12, 2017, 4:44 PM IST
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನ ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿಕೆ ನೀಡಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸರ್ಕಾರ 5 ನೇ ವರ್ಷಕ್ಕೆ ಕಾಲಿಟ್ಟ ಸಂಭ್ರಮದಲ್ಲಿ ನುಡಿದಂತೆ ನಡೆದಿದ್ದೇವೆ ಭರವಸೆಗಳನ್ನು ಈಡೇರಿಸಿದ್ದೇವೆ ಎನ್ನುವ ಪುಸ್ತಕವನ್ನು ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿದರು.ಅಚ್ಚರಿಯೆಂದರೆ ಈ ವೇಳೆ ಯವೊಬ್ಬ ಸಚಿವರೂ ಉಪಸ್ಥಿತರಿರಲಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ‘ನನಗೆ ಆತ್ಮವಿಶ್ವಾಸವಿದೆ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಮುಂದಿನ ಚುನಾವಣೆಯನ್ನು ನನ್ನ ನೇತೃತ್ವದಲ್ಲಿ ಎದುರಿಸಲಾಗುತ್ತದೆ. ಆದರೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.
ಈ ಹಿಂದೆ ನೀವೇ ಮುಂದಿನ ಸಿಎಂ ಅಭ್ಯರ್ಥಿ ನಾನೇ ಎಂದಿದ್ದೀರಲ್ಲಾ ಎಂದು ಪ್ರಶ್ನಿಸಿದಾಗ ‘ಇಲ್ಲಾ ಅದು ನಾನು ಭಾಷಣ ಮಾಡುವಾಗ ಯರೋ ಒಬ್ಬ ಎದ್ದು ನಿಂತು ನಿವೇ ಮುಂದೆಯೂ ಸಿಎಂ ಆಗ್ಬೇಕು ಎಂದ .ಅದಕ್ಕೆ ಆಯ್ತಪ್ಪಾ ಮುಂದೆಯೂ ನಾನೇ ಆಯ್ತೀನಿ ಬಿಡು ಅಂದಿದ್ದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥವಿಸಿಕೊಳ್ಳಲಾಗಿದೆ’ ಎಂದರು.
ಯಡಿಯೂರಪ್ಪ ವಿರುದ್ಧ ಕಿಡಿ
ಸರ್ಕಾರದ ಬಗ್ಗೆ ಯಡಿಯೂರಪ್ಪ ಹಾಕಿರುವ ಚಾರ್ಜ್ ಶೀಟ್ ಬಗ್ಗೆ ಕೇಳಿದಾಗ ಕೆಂಡಾಮಂಡಲವಾದ ಸಿದ್ದರಾಮಯ್ಯ ‘ಅದೊಂದು ಸುಳ್ಳಿನ ಕಂತೆ, ಜೈಲಿಗೆ ಹೋಗಿಬಂದು ಪೋಲಿಸರಿಂದ ಹತ್ತಾರು ಚಾರ್ಜ್ ಶೀಟ್ ಹಾಕಿಸಿಕೊಂಡಿರುವ, ಸುಪ್ರೀಂಕೋರ್ಟ್, ಹೈಕೋರ್ಟ್ ಮತ್ತು ಲೋಕಾಯುಕ್ತದಲ್ಲೂ ಮೊಕದ್ದಮೆಗಳನ್ನು ಎದುರಿಸುತ್ತಿರುವ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ’ ಎಂದರು.
ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಎಂಬ ವರದಿ ಬಗ್ಗೆ ಕೇಳಿದಾಗ ಕಿಡಿಕಾರಿದ ಅವರು ‘ಈ ವರದಿಯನ್ನು ನರೇಂದ್ರಮೋದಿ ಕೃಪಾಪೋಷಿತ ನಾಟಕ ಮಂಡಳಿಯಾದ ನೀತಿ ಆಯೋಗದ ಸದಸ್ಯರೊಬ್ಬರು ಬಿಡುಗಡೆ ಮಾಡಿದ್ದು, ಆರೂವರೆ ಕೋಟಿ ಜನರ ಪೈಕಿ ಕೇವಲ 2000 ಜನರ ಅಭಿಪ್ರಾಯ ಪಡೆದು ನಡೆಸಿದ ಸಮೀಕ್ಷೆ ನಂಬಲು ಸಾಧ್ಯವಿಲ್ಲ’ ಎಂದರು.
ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷ ಈಗಾಗಲೇ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದು,ಇದೇ ವಿಚಾರದಲ್ಲಿ ಪಕ್ಷದಲ್ಲಿ ಭಿನ್ನಮತ ಕಾಣಿಸಿಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣಗೋಪಾಲ್ ಅವರ ಬಳಿ ರಾಜ್ಯದ ಹಲವು ನಾಯಕರು ಅಸಮಧಾನ ಹೊರ ಹಾಕಿದ್ದರು. ಆ ಬಳಿಕ ಎಐಸಿಸಿ ಪಕ್ಷದಲ್ಲಿ ಹಲವು ಬದಲಾವಣೆ ಮಾಡಲು ಮುಂದಾಗಿದೆ. ಕೆಪಿಸಿಸಿಗೆ ನೂತನ ಅಧ್ಯಕ್ಷ ನ ಆಯ್ಕೆಯ ವಿಚಾರವೂ ಕಗ್ಗಂಟಾಗಿ ಪರಿಣಮಿಸಿದೆ. ಇದೀಗ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕಾಂಗ್ರೆಸ್‌ನ ನಾಯಕತ್ವದ ಬದಲಾವಣೆಯ ಸಾಧ್ಯತೆಯನ್ನು ಸೂಚಿಸುವಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
China Badminton: ಚಿರಾಗ್- ಸಾತ್ವಿಕ್ ಸೆಮಿಫೈನಲ್‌ಗೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.