CM Siddaramaiah ಸಂಧಾನ ಯಶಸ್ವಿ : ಬಸ್ ಮುಷ್ಕರ ವಾಪಸ್
ಸಂಕ್ರಾಂತಿ ಅನಂತರ ಸಭೆ ನಡೆಸಲು ಸರಕಾರ ಕೋರಿಕೆ..
Team Udayavani, Dec 30, 2024, 6:34 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗಿನ ಸಭೆಯ ಫಲಶ್ರುತಿಯಾಗಿ ಸಾರಿಗೆ ಸಚಿವರ ಲಿಖೀತ ಮನವಿ ಮೇರೆಗೆ ಡಿ. 31ರಿಂದ ಕರೆ ನೀಡ ಲಾಗಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.
ಸಮಿತಿಯ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಅನಿರ್ಧಿಷ್ಟಾ ವಧಿ ಮುಷ್ಕರ ಮುಂದೂಡಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಎಲ್ಲ ನೌಕರರೂ ಡಿ. 31ರಂದು ಕೆಲಸಕ್ಕೆ ಹಾಜರಾಗಬೇಕು ಎಂದು ವಿನಂತಿಸಿದ್ದಾರೆ.
ಸಂಕ್ರಾಂತಿಯ ಅನಂತರ ಸಭೆ
ರವಿವಾರ ಸಂಜೆ ಮುಖ್ಯಮಂತ್ರಿಗಳ ಜತೆ ಸಾರಿಗೆ ಸಚಿವರು, ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳು ನಡೆಸಿದ ಸಭೆಯ ಫಲಶ್ರುತಿಯಾಗಿ ಸಾರಿಗೆ ಸಚಿವರು ಜಂಟಿ ಕ್ರಿಯಾ ಸಮಿತಿಗೆ ಲಿಖೀತವಾಗಿ ಮನವಿ ಮಾಡಿದರು. ಉದ್ದೇಶಿತ ಮುಷ್ಕರವನ್ನು ಹಿಂಪಡೆಯಬೇಕು, ಸಂಕ್ರಾಂತಿ ಹಬ್ಬದ ಅನಂತರ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಜತೆ ಸಭೆ ಏರ್ಪಡಿಸುವುದಾಗಿ ಕೋರಿದರು. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲು ಜಂಟಿ ಕ್ರಿಯಾ ಸಮಿತಿ ಒಮ್ಮತದಿಂದ ತೀರ್ಮಾನಿಸಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಸಾರಿಗೆ ನೌಕರರ ಸಂಘಟನೆಯ ಮುಖಂಡರ ಜತೆ ಮಾತುಕತೆ ನಡೆಸಲಾಗಿದೆ. ಮುಷ್ಕರ ಕೈಬಿಡುವ ನಿರ್ಧಾರಕ್ಕೆ ಬಂದಿದ್ದಾರೆ. ಸಂಕ್ರಾಂತಿಯ ಅನಂತರ ಸಾರಿಗೆ ನೌಕರರ ಸಂಘಟನೆ ಮುಖಂಡರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ.
– ರಾಮಲಿಂಗಾರೆಡ್ಡಿ,ಸಾರಿಗೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.