CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್ ಖರೀದಿಸಿದರೆ ಸಹಿಸುವುದಿಲ್ಲ
Team Udayavani, Jun 19, 2024, 12:29 AM IST
ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದಿದ್ದರೂ ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್ ಮತ್ತಿತರ ವಸ್ತುಗಳನ್ನು ಖರೀದಿಸಿದರೆ ಸಹಿಸುವುದಿಲ್ಲ. ಅನಾವಶ್ಯಕವಾಗಿ 4ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್ ಕರೆದು ಖರೀದಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಸಚಿವ ಬಿ.ನಾಗೇಂದ್ರ ರಾಜೀನಾಮೆ ಅನಂತರ ಇದೇ ಮೊದಲ ಬಾರಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಕ್ರೀಡಾ ಇಲಾಖೆಗಳ ಪರಿಶೀಲನ ಸಭೆ ನಡೆಸಿದ ಅವರು, ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, ಶೇ. 99.75 ಸಾಧನೆಯಾಗಿದೆ. ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸುವುದನ್ನು ಸಹಿಸಲಾಗುವುದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಸೂಚಿಸಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಒಟ್ಟು 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು 194.71 ಕೋಟಿ ರೂ. ಒದಗಿಸಲಾಗಿದೆ. ಎಸೆಸೆಲ್ಸಿಯಲ್ಲಿ ಶೇ.77 ಫಲಿತಾಂಶ ಬಂದಿದ್ದು ಫಲಿತಾಂಶ ಉತ್ತಮಪಡಿಸಬೇಕು. 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.