ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ
Team Udayavani, Jun 8, 2021, 4:22 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು. ಕೋವಿಡ್ 19 ನಿರ್ವಹಣೆಯಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಸಿಎಂ ಶ್ಲಾಘಿಸಿದರು.
ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ನಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು.
ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ಆರೋಗ್ಯದ ಸ್ಥಿತಿ ಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ವಿವರ, ಸಾರ್ವಜನಿಕರು, ಮೇಲಾಧಿಕಾರಿಗಳ ಸಹಕಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.
ಇದನ್ನೂ ಓದಿ:ಭಾಸ್ಕರ್ ಶೆಟ್ಟಿ, ರಾಜೇಶ್ವರಿ-ನಿರಂಜನ್ ಮತ್ತು ಹೋಮಕುಂಡ.. 5 ವರ್ಷಗಳ ಹಿಂದೆ ನಡೆದಿದ್ದೇನು?
ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯ ಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಾಗಲು ಭಯ ಪಡುತ್ತಿದ್ದರು. ಆದರೆ ಇದೀಗ ಸಹಕರಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಲಸಿಕೆ ಹಾಕಿಸಲು ತಮ್ಮ ಗ್ರಾಮದ ಜನರ ಮನವೊಲಿಸಿ, ಮೇಲಾಧಿಕಾರಿಗಳ ಸಹಾಯದಿಂದ ವಾಹನ ವ್ಯವಸ್ಥೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಿದ್ದನ್ನು ಸ್ಮರಿಸಿಕೊಂಡರು.
ಕೋವಿಡ್ ಪೀಡಿತರಾಗಿದ್ದ ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ. ಕೋವಿಡ್ ಕೇರ್ ಸೆಂಟರಿನಿಂದಲೇ ಸಂವಾದದಲ್ಲಿ ಪಾಲ್ಗೊಂಡರು. ಕಳೆದ 15 ದಿನಗಳ ವರೆಗೆ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿತ್ತು. ಇದೀಗ ಏಳು ಪ್ರಕರಣಗಳು ಕಂಡು ಬಂದಿವೆ. ಇಬ್ಬರು ಹೋಂ ಐಸೊಲೇಷನ್ ನಲ್ಲಿದ್ದು, ಉಳಿದವರು ಕೋವಿಡ್ ಕೇರ್ ಸೆಂಟರಿನಲ್ಲಿ ದಾಖಲಾಗಿದ್ದಾರೆ ಎಂದು ವಿವರಿಸಿದರು.
ಜನರು ಲಸಿಕೆಯ ಸುರಕ್ಷತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ, ತಮ್ಮ ಪತಿಗೇ ಮೊದಲಿಗೆ ಲಸಿಕೆ ಕೊಡಿಸಿ, ಜನರಲ್ಲಿ ವಿಶ್ವಾಸ ಮೂಡಿಸಿದ ಅನುಭವವನ್ನು ರಾಮನಗರದ ಶಿವಲಿಂಗಮ್ಮ ಹಂಚಿಕೊಂಡರು. ವಿಜಯಪುರ ಜಿಲ್ಲೆಯ ದೀಪಾ ಬಜ್ಜನವರ ಅವರು ಕೋವಿಡ್ ಕೇರ್ ಸೆಂಟರಿಗೆ ದಾಖಲಾಗಲು ಜನರು ಹಿಂದೇಟು ಹಾಕಿದ ಅನುಭವವನ್ನು ವಿವರಿಸಿದರು. ಸಬ್ಬಮಂಗಲದ ರತ್ನಮ್ಮ ಅವರು, ಮನೆ ಮನೆಗೆ ಭೇಟಿ ನೀಡಿ, ಅರಿವು ಮೂಡಿಸುವುದರೊಂದಿಗೆ ಸೋಂಕಿತರಿಗೆ ಪೌಷ್ಟಿಕ ಆಹಾರ ಸೇವಿಸುವಂತೆ ಮನವರಿಕೆ ಮಾಡುತ್ತಿರುವುದಾಗಿ ತಿಳಿಸಿದರು.
ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಬಡಜನರ ಚಿಕಿತ್ಸೆಗೆ ದಾನಿಗಳಿಂದ ನೆರವು ದೊರಕಿಸುವ ಪ್ರಯತ್ನ ಮಾಡಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.
ಧಾರವಾಡ ಜಿಲ್ಲೆ ಅಮ್ಮಿನಭಾವಿಯ ಪ್ರೇಮಾ ಪ್ರಕಾಶ್ ಕಬ್ಬೂರು, ದಕ್ಷಿಣ ಕನ್ನಡ ಜಿಲ್ಲೆ ಸುಲ್ಕೇರಿಯ ಹೇಮಲತಾ, ರಾಮನಗರ ಜಿಲ್ಲೆಯ ದೊಡ್ಡಗಂಗವಾಡಿಯ ಶಿವಲಿಂಗಮ್ಮ, ವಿಜಯಪುರ ಜಿಲ್ಲೆ ಕಂಬಾಗಿಯ ದೀಪಾ ಬಜ್ಜನವರ್, ಬೆಂಗಳೂರು ನಗರ ಜಿಲ್ಲೆ ಸಬ್ಬಮಂಗಲದ ರತ್ನಮ್ಮ, ಬಳ್ಳಾರಿ ಜಿಲ್ಲೆ ದಬ್ಬೂರಿನ ಪರಿಮಳಾ, ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ., ಕೊಪ್ಪಳ ಜಿಲ್ಲೆ ನವಲಿಯ ಲಕ್ಷ್ಮವ್ವ ನಾಯಕ್, ರಾಯಚೂರು ಜಿಲ್ಲೆ ಗಣಮೂರಿನ ಇಂದಿರಾ, ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಮುಖ್ಯಮಂತ್ರಿಯವರೊಂದಿಗೆ ಸಂವಾದ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.