CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?
Team Udayavani, Jul 27, 2024, 7:20 AM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣಗಳು ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಾರ ದಿಲ್ಲಿಗೆ ತೆರಳುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ವಾಲ್ಮೀಕಿ, ಮುಡಾ ಹಗರಣಗಳ ಬಗ್ಗೆ ಸಿದ್ದರಾಮಯ್ಯ ಮಾಹಿತಿ ನೀಡುವ ಸಾಧ್ಯತೆಗಳಿವೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಮಂಡಲದ ಅಧಿವೇಶನದಲ್ಲಿ ಈ 2 ಪ್ರಕರಣಗಳನ್ನು ಪ್ರಸ್ತಾವಿಸಿದ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸರಕಾರದ ವಿರುದ್ಧ ಮುಗಿ ಬಿದ್ದಿದ್ದವು. ಅಲ್ಲದೆ ವಿಶೇಷವಾಗಿ ಮುಡಾ ಹಗರಣದ ಬಗ್ಗೆ ಚರ್ಚೆಗೆ ಪಟ್ಟು ಹಿಡಿದು ಉಭಯ ಸದನ ಗಳಲ್ಲಿ ಅಹೋರಾತ್ರಿ ಧರಣಿ ನಡೆಸಿ ಗದ್ದಲ ಉಂಟಾಗಿದ್ದರಿಂದ ಅಧಿವೇಶನ ನಿಗದಿತ ದಿನಕ್ಕಿಂತ ಒಂದು ದಿನ ಮೊದಲೇ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿತ್ತು.
ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಸಂಸದರು ದಿಲ್ಲಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸುವ ಮೂಲಕ 2 ಹಗರಣಗಳ ಬಗ್ಗೆ ದೇಶದ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಅಲ್ಲದೆ ಬಿಜೆಪಿ- ಜೆಡಿಎಸ್ ನಾಯಕರು ದಿಲ್ಲಿಗೆ ತೆರಳಿ ರಾಷ್ಟ್ರಪತಿಗೆ ದೂರು ಕೊಡುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಈ ಬೆಳ ವಣಿಗೆ ಮುಖ್ಯಮಂತ್ರಿ ಅವರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ಎಸ್‌ಐಟಿ ತನಿಖೆಯಲ್ಲಿ ಆಗಿರುವ ಪ್ರಗತಿ, ಈ ಮಧ್ಯೆ ಇ.ಡಿ. ಮಧ್ಯಪ್ರವೇಶ ಮತ್ತಿತರ ಬೆಳವಣಿಗೆಗಳ ಬಗ್ಗೆ ಹಾಗೂ ಮುಡಾ ಪ್ರಕರಣದಲ್ಲಿ ವಾಸ್ತವ ವಿಷಯ ಏನು ಎಂಬುದನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ದಿಲ್ಲಿಗೆ ತೆರಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಜತೆಗೆ ಕೆಲವು ಆಪ್ತ ಸಚಿವರು ಕೂಡ ತೆರಳುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.