ಮಾಜಿ ಸಂಸದ ಜಿ.ಮಾದೇಗೌಡರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ
Team Udayavani, Jul 17, 2021, 9:42 PM IST
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಂಸದ ಹಾಗೂ ಮಾಜಿ ಸಚಿವ ಜಿ.ಮಾದೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗಾಂಧಿವಾದಿಯಾಗಿ, ಗಾಂಧಿ ಅವರ ತತ್ವ ಆದರ್ಶಗಳನ್ನು ಜೀವನುದ್ದಕ್ಕೂ ಪಾಲಿಸಿದ ಮಾದೇಗೌಡರು, ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ನಿಧನದಿಂದ ರೈತ ಹಾಗೂ ಜನಪರ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ನಿಧನ
ಡಿಸಿಎಂ ಕಂಬನಿ: ರೈತಪರ ನಾಯಕ, ಹೋರಾಟಗಾರ ಜಿ.ಮಾದೇಗೌಡರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಕೆ.ಎಂ.ದೊಡ್ಡಿಯ ಆಸ್ಪತ್ರೆಗೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದೆ. ಆರೋಗ್ಯ ಸುಧಾರಣೆಯಾಗಿ ಕ್ಷೇಮವಾಗಿ ಅವರು ಮನೆಗೆ ವಾಪಸ್ ಬರುತ್ತಾರೆಂಬ ವಿಶ್ವಾಸವಿತ್ತು. ಆದರೆ ನನ್ನನ್ನೂ ಒಳಗೊಂಡಂತೆ ಅಸಂಖ್ಯಾತ ಅಭಿಮಾನಿಗಳನ್ನು ನಿರಾಶೆಗೊಳಿಸಿ ಅವರು ಅಗಲಿರುವುದು ತೀವ್ರ ದುಃಖ ಉಂಟು ಮಾಡಿದೆ ಎಂದು ಡಿಸಿಎಂ ಕಂಬನಿ ಮಿಡಿದ್ದಾರೆ.
ಮಾದೇಗೌಡರು ಶಾಸಕರಾಗಿದ್ದರು, ಸಚಿವರಾಗಿದ್ದರು, ಸಂಸದರಾಗಿದ್ದರು. ಛಲಬಿಡದ ಹೋರಾಟಗಳಿಂದ ಸಮಾಜಮುಖಿಯಾಗಿ ಕೆಲಸ ಮಾಡಿದ ಅವರು ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು. ಕಾವೇರಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ ಅವರು, ರೈತರ ಹಿತಕ್ಕಾಗಿ ತಮ್ಮ ರಾಜಕೀಯ ಭವಿಷ್ಯವನ್ನು ಲೆಕ್ಕಿಸದ ನಿಷ್ಠುರ ನಾಯಕರಾಗಿದ್ದರು. ಅವರ ರಾಜಕೀಯ ಮತ್ತು ವೈಯಕ್ತಿಕ ಜೀವನ ತೆರೆದ ಪುಸ್ತಕವಾಗಿತ್ತು ಎಂದು ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.