ಕೋವಿಡ್ ನಿಯಂತ್ರಣಕ್ಕೆ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವ ಅತ್ಯಗತ್ಯ: ಗೃಹ ಸಚಿವ ಬೊಮ್ಮಾಯಿ
Team Udayavani, May 20, 2021, 4:01 PM IST
ಬೆಂಗಳೂರು: ಖಾಸಗಿ ಸಂಘಸಂಸ್ಥೆಗಳ ಸಹಭಾಗಿತ್ವ ಇದ್ದಾಗ ಮಾತ್ರ ಕೋವಿಡ್ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಹೀಗಾಗಿ ಕೋವಿಡ್ ವಿರುದ್ಧ ಹೋರಾಟಕ್ಕೆ ಮುಂದಾಗುವ ಖಾಸಗಿ ಸಂಘ-ಸಂಸ್ಥೆಗಳಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿನ ರಾಜೀವ್ ಗಾಂಧಿ ಮಹಾವಿದ್ಯಾಲಯದಲ್ಲಿ ಆರಂಭವಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಂಗಳೂರಿನಲ್ಲಿ ಪಕ್ಷಾತೀತವಾಗಿ ಕೋವಿಡ್ ವಿರುದ್ಧ ಹೋರಾಟ ಆರಂಭವಾಗಿದೆ. ಖಾಸಗಿ ಸಂಘ ಸಂಸ್ಥೆಗಳು ಕೋವಿಡ್ ನಿಯಂತ್ರಣಕ್ಕೆ ಶಕ್ತಿಮೀರಿ ಪ್ರಯತ್ನ ಮಾಡುತ್ತಿವೆ. ಇದು ನಿಜಕ್ಕೂ ಶ್ಲಾಘನೀಯವಾದದ್ದು. ಎಲ್ಲ ಪಕ್ಷಗಳ ಶಾಸಕರು ಪಕ್ಷಬೇಧ ಮರೆತು ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕೊರೊನಾ ನಿಯಂತ್ರಣಕ್ಕೆ ಹರಸಾಹಸ ಮಾಡುತ್ತಿದ್ದಾರೆ. ಇದಕ್ಕೆ ಹೆಬ್ಬಾಳದ ರಾಜೀವ್ ಗಾಂಧಿ ದಂತ ಮಹಾವಿದ್ಯಾಲಯ ಕೋವಿಡ್ ಕೇರ್ ಕೇಂದ್ರವಾಗಿರುವುದೇ ನಿದರ್ಶನ. ಈ ಸೆಂಟರ್ ಸ್ಥಾಪನೆಗೆ ಬಿಬಿಎಂಪಿ ಎಲ್ಲ ರೀತಿಯ ಸಹಕಾರ ನೀಡಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಅನುದಾನರಹಿತ ಶಾಲೆ ಶಿಕ್ಷಕ-ಶಿಕ್ಷಕೇತರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂ ಗೆ ಸಚಿವರ ಪತ್ರ
ಕೇವಲ ಬೆಂಗಳೂರು ಅಷ್ಟೇ ಅಲ್ಲ. ರಾಜ್ಯಾದ್ಯಂತ ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ನಿಯಂತ್ರಣಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಅವರು ತಿಳಿಸಿದರು
ರಾಜ್ಯದಲ್ಲಿ ಸೋಂಕು ವಿರುದ್ಧ ಹೋರಾಟದಲ್ಲಿ ಹಗಲಿರುಳು ಕೆಲಸ ಮಾಡುತ್ತಿರುವ ಪೊಲೀಸರ ಕರ್ತವ್ಯವನ್ನು ಹೈಕೋರ್ಟ್ ಮುಕ್ತಕಂಠದಿಂದ ಪ್ರಶಂಸೆ ಮಾಡಿದೆ. ಮಳೆ, ಗಾಳಿ, ಬಿಸಿಲು ಎನ್ನದೆ ದಿನದ 24×7 ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಅವರು ಜನರ ಪ್ರೀತಿ ವಿಶ್ವಾಸವನ್ನು ಗಳಿಸುತ್ತಾರೆ. ತಪ್ಪು ಮಾಡಿದವರಿಗೆ ಶಿಕ್ಷೆಯನ್ನು ನೀಡುತ್ತಾರೆ. ಹೈಕೋರ್ಟ್ ನ ಈ ಪ್ರಶಂಸೆ ನಮಗೆ ಪ್ರೋತ್ಸಾಹ ಎಂದು ಬೊಮ್ಮಾಯಿ ತಿಳಿಸಿದರು.
ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಸಂದರ್ಭದಲ್ಲಿ ವಸತಿ ಸಚಿವ ವಿ ಸೋಮಣ್ಣ, ಹೆಬ್ಬಾಳ ಶಾಸಕ ಬೈರತಿ ಸುರೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.