Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ
Team Udayavani, Oct 21, 2024, 6:55 AM IST
ಬೆಂಗಳೂರು: ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಹಿಂದು ಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಹಾಗೂ ಒಳಮೀಸಲಾತಿ ವಿಷಯಗಳನ್ನು ಸದ್ಯಕ್ಕೆ ಮುಂದೂಡಲು ಸರಕಾರ ಚಿಂತನೆ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ಯಲ್ಲಿ “ಕಾವೇರಿ’ ನಿವಾಸ ದಲ್ಲಿ ನಡೆದ ಸಚಿವರ ಸಭೆಯಲ್ಲಿ ಜಾತಿಗಣತಿ ಮತ್ತು ಒಳ ಮೀಸಲಾತಿ ವಿಚಾರವೂ ಚರ್ಚೆಗೆ ಬಂದಿದ್ದು, ಪ್ರಸ್ತುತ ಉಪಚುನಾವಣೆ ಘೋಷಣೆ ಯಾಗಿ ರುವುದರಿಂದ ನೀತಿಸಂಹಿತೆ ಬಾಧಕ ವಾಗುತ್ತದೆಯೇ ಇಲ್ಲವೇ ಎಂಬ ಗೊಂದಲ ಏರ್ಪಟ್ಟಿದೆ.ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದೆ.
ಒಳ ಮೀಸ ಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಕೊಟ್ಟಿರುವುದು ಉಪ ಚುನಾ ವಣೆ ಘೋಷಣೆಗೆ ಮುನ್ನ ಆಗಿರುವುದರಿಂದ ನೀತಿಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಕೆಲವು ಸಚಿವರು ಅಭಿಪ್ರಾಯ ಮಂಡಿಸಿದರೆ, ಮತದಾರರ ಮೇಲೆ ಪ್ರಭಾವ ಬೀರುತ್ತದೆ ಎನ್ನುವ ಅಂಶವನ್ನು ಚುನಾವಣ ಆಯೋಗ ಪರಿಗಣಿಸಬಹುದು. ಹೀಗಾಗಿ ಈ ಕುರಿತು ಚುನಾವಣ ಆಯೋಗದಿಂದ ಸ್ಪಷ್ಟನೆ ಕೇಳುವಂತೆ ಸಲಹೆಯನ್ನು ಇನ್ನು ಕೆಲವು ಸಚಿವರು ನೀಡಿದರು.
ಈಗಾಗಲೇ ಚುನಾವಣ ಆಯೋಗಕ್ಕೆ ಸ್ಪಷ್ಟನೆ ಕೇಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದ್ದು, ಸ್ಪಷ್ಟನೆ ಬಂದ ಅನಂತರ ಈ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ಚರ್ಚಿಸೋಣ ಎಂಬ ನಿಲುವಿಗೆ ಬರಲಾಯಿತು.
ಅ. 28ಕ್ಕೆ ಸಚಿವ ಸಂಪುಟ ಸಭೆ
ಈ ಹಿಂದೆ ಅ. 18ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸುವುದಾಗಿ ಹೇಳಿದ್ದ ಸಿಎಂ, ಸಭೆಯನ್ನೇ ನಡೆಸಲಿಲ್ಲ. ಅ. 24ರಂದು ಸಚಿವ ಸಂಪುಟ ಸಭೆ ಕರೆದಿದ್ದು, ಅಲ್ಲಿ ವಿಷಯ ಬರಲಿದೆ ಎನ್ನಲಾಗಿತ್ತು. ಆದರೆ ಈಗ ಅ. 24ರ ಸಂಪುಟ ಸಭೆಯೂ ಮುಂದೂಡಿಕೆಯಾಗಿದ್ದು, ಅ. 28ರ ಸೋಮವಾರ ನಡೆಸಲು ಸಿಎಂ ತೀರ್ಮಾನಿಸಿದ್ದಾರೆ. ಒಂದು ವೇಳೆ ನೀತಿ ಸಂಹಿತೆ ಬಾಧಕವಾಗುತ್ತದೆ ಎನ್ನುವುದಾದರೆ, ಫಲಿತಾಂಶದ ಅನಂತರವಷ್ಟೇ ಒಳಮೀಸಲಾತಿ ಹಾಗೂ ಜಾತಿಗಣತಿ ವರದಿ ಚರ್ಚೆಗೆ ಬರಲಿದೆ. ಅಲ್ಲಿಯವರೆಗೆ ಸರಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.